• About us
  • Contact us
  • Disclaimer
Sunday, August 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ, ಬರಲಿದ್ದಾರೆ ಲಕ್ಷ ಲಕ್ಷ ಜನ!

Coastal Times by Coastal Times
November 5, 2023
in ರಾಜ್ಯ
ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ, ಬರಲಿದ್ದಾರೆ ಲಕ್ಷ ಲಕ್ಷ ಜನ!
72
VIEWS
WhatsappTelegramShare on FacebookShare on Twitter

ಬೆಂಗಳೂರು: ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ  ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಈ ಕಂಬಳಕ್ಕೆ ಸರ್ಕಾರದ ವತಿಯಿಂದ ಒಂದು ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

ನ. 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಶನಿವಾರ ಸಂಜೆ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಕೆ. ಪ್ರಕಾಶ್ ಶೆಟ್ಟಿ ಈ ವಿಷಯ ತಿಳಿಸಿದರು. ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

ಇದೀಗ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಕಂಬಳ ಸಮಿತಿಯವರ ಉತ್ಸಾಹವನ್ನು ಕಂಡ ಸಿಎಂ ಅವರು ಕಂಬಳಕ್ಕೆ ಸರಕಾರದಿಂದ ಒಂದು ಕೋಟಿ ರೂ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು ಕಂಬಳದ ಮೆರುಗನ್ನು ಹೆಚ್ಚಿಸಿದೆ.

ಕಂಬಳದಲ್ಲಿ ಸುಮಾರು 150 ಕ್ಕೂ‌ಮಿಕ್ಕಿ ಜೋಡಿ ಕಂಬಳ ಕೋಣಗಳು ಭಾಗವಹಿಸಲಿದ್ದು ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕೋಣಗಳನ್ನು ಕರೆದೊಯ್ಯಲಾಗುತ್ತದೆ. ಕಂಬಳ ಕೋಣಗಳಿಗೆ ಬೇಕಾದ ಆಹಾರ ಮತ್ತು ನೀರನ್ನು ಕೂಡಾ ಮಂಗಳೂರಿನಿಂದಲೇ ವ್ಯವಸ್ಥೆ ಮಾಡಲಾಗುತ್ತಿದೆ.

ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ತಿಳಿಸಿದರು. ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರು ಕಂಬಳಕ್ಕೆ ಆಭರಣ ಜುವೆಲ್ಲರ್ಸ್ ಅವರು ಶೀರ್ಷಿಕೆ ಪ್ರಾಯೋಜಕರಾಗಿದ್ದು, ಆಭರಣ ಜುವೆಲ್ಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಕಾಮತ್, ಬೆಂಗಳೂರು ಕಂಬಳ ಸಮಿತಿ ಗೌರವ ಸಲಹೆಗಾರ ಉಪೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಇಬ್ಬರು ಅಪ್ರಾಪ್ತೆಯರೊಂದಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್..!

Next Post

ಕೇರಳ ಬಾಂಬ್ ಸ್ಫೋಟ ; ಸಾವಿನ ಸಂಖ್ಯೆ 4ಕ್ಕೆ ಏರಿಕೆ, ಆರೋಪಿ ಡೊಮಿನಿಕ್ ಗೆ 10 ದಿನ ಪೊಲೀಸ್ ಕಸ್ಟಡಿ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
39
Next Post
ಕೇರಳ ಬಾಂಬ್ ಸ್ಫೋಟ ; ಸಾವಿನ ಸಂಖ್ಯೆ 4ಕ್ಕೆ ಏರಿಕೆ, ಆರೋಪಿ ಡೊಮಿನಿಕ್ ಗೆ 10 ದಿನ ಪೊಲೀಸ್ ಕಸ್ಟಡಿ

ಕೇರಳ ಬಾಂಬ್ ಸ್ಫೋಟ ; ಸಾವಿನ ಸಂಖ್ಯೆ 4ಕ್ಕೆ ಏರಿಕೆ, ಆರೋಪಿ ಡೊಮಿನಿಕ್ ಗೆ 10 ದಿನ ಪೊಲೀಸ್ ಕಸ್ಟಡಿ

Discussion about this post

Recent News

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
68
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d