• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ ; ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣ ಕಳವು

Coastal Times by Coastal Times
November 5, 2024
in ಕ್ರೈಮ್ ನ್ಯೂಸ್
ಬಂಟ್ವಾಳ ; ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣ ಕಳವು
38
VIEWS
WhatsappTelegramShare on FacebookShare on Twitter

ಬಂಟ್ವಾಳ: ದೇವಸ್ಥಾನದ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶ ಮಾಡಿದ ಕಳ್ಳರ ತಂಡ, ನೂರಾರು ವರ್ಷಗಳ ಇತಿಹಾಸವಿದ್ದ ದೇವರಿಗೆ ಸಂಬಂಧಿಸಿದ ಲಕ್ಷಾಂತರ ರೂ. ಮೌಲ್ಯ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋಗಿದ್ದು, ಎಲ್ಲಾ ದೃಶ್ಯಾವಳಿಗಳು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಸಮೀಪದ ಸುಜೀರು ಎಂಬಲ್ಲಿರುವ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ (ನ.04) ಮುಂಜಾನೆ 2.30 ಲಕ್ಷದ ಮೌಲ್ಯದ ನಗ ನಗದುಗಳನ್ನು ಕಳ್ಳರು ಎಗರಿಸಿದ್ದಾರೆ. ದೇವಳಕ್ಕೆ ಸಂಬಂಧಿಸಿದಂತೆ ಅನಾದಿ ಕಾಲದ ನೂರಾರು ವರ್ಷಗಳ ಹಳೆಯದಾದ ಹಿರಿಯರು ಮಾಡಿಸಿದಂತ ಸುಮಾರು ಒಂದುವರೆ ಕೆ.ಜಿ‌ ತೂಕದ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ದೇವರ ಮೂಗುತಿ ದೇವರ ಕೊಡೆ ಸೇರಿದಂತೆ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವಾಗಿದೆ. ಇದರ ಜೊತೆಗೆ ಕಾಣಿಕೆ ಹುಂಡಿಯಲ್ಲಿರುವ ನಗದನ್ನು ಕೊಂಡುಹೋಗಿದ್ದಾರೆ. ಆದಿತ್ಯವಾರ ಮಂದಿರದಲ್ಲಿ ವಿಶೇಷವಾದ ಪೂಜಾ ಕಾರ್ಯಕ್ರಮವಿದ್ದ ಕಾರಣ ಕಾಣಿಕೆ ಹುಂಡಿಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹಣವಿರಬಹುದು ಎಂದು ಹೇಳಲಾಗುತ್ತಿದೆ.

ಸಿ.ಸಿ.ಕ್ಯಾಮರಾದಲ್ಲಿ ಸೆರೆ : ಸುಮಾರು 5 ಜನರ ತಂಡ ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಹನದ ಮೂಲಕ ಬಂದ ಕಳ್ಳರ ತಂಡ ಸುಮಾರು 3.30 ರ ಸಮಯದಲ್ಲಿ ದೇವಸ್ಥಾನದ ಹಿಂಬದಿಯ ಬಾಗಿಲಿನ ಚಿಲಕ ಮುರಿದು ಒಳಪ್ರವೇಶ ಮಾಡಿದ್ದಾರೆ. ಬಳಿಕ ದೇವಸ್ಥಾನದ ಸುತ್ತಲೂ ತಿರುಗಾಡಿ ಮಾಹಿತಿ ಪಡೆದುಕೊಂಡು, ಗರ್ಭಗುಡಿಯ ಒಳಗೆ ಪ್ರವೇಶ ಮಾಡಿದ್ದಾರೆ. ಅಲ್ಲಿ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ವಸ್ತುಗಳನ್ನು ಗೋಣಿಯಲ್ಲಿ ತುಂಬಿಸಿಕೊಂಡು ದೇವಳದ ಗೋಪುರಕ್ಕೆ ಬಂದು, ಕಳ್ಳತನ ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಒಂದೇ ಚೀಲದಲ್ಲಿ ಭದ್ರಗೊಳಿಸಿ ವಾಪಸು ಹೋಗುವ ದೃಶ್ಯ ಕಂಡು ಬಂದಿದೆ. ಕಳ್ಳರ ಕೈಯಲ್ಲಿ ಮಾರಕಾಸ್ತ್ರಗಳು ಕೂಡಾ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳತನ ಮಾಡಿದ ಬಳಿಕ ಸುಮಾರು 4 ಗಂಟೆ ಅಂದಾಜಿಗೆ ದೇವಸ್ಥಾನದಿಂದ ಹೊರಗೆ ಹೋಗಿದ್ದಾರೆ.

ದೇವಸ್ಥಾನದ ಕಂಪೌಂಡ್ ನ ಒಳಗಡೆಯೇ ಅರ್ಚಕರ ಮನೆಯಿದೆ.  ಕಳ್ಳರು ದೇವಸ್ಥಾನದ ಒಳಗೆ ಪ್ರವೇಶ ಮಾಡುವುದನ್ನು ಇವರ ಸಾಕು ನಾಯಿ ಗಮನಿಸಿ ಜೋರಾಗಿ ಬೊಗಳಲು ಆರಂಭಿಸಿದೆ. ನಾಯಿ ಬೊಗಳಿದ್ದರಿಂದ ಅರ್ಚಕರಿಗೆ ಎಚ್ಚರವಾಗಿದೆ. ನಾಯಿ ಯಾಕೆ ಬೊಗಳುತ್ತಿದೆ ಎಂದು ಸಿ.ಸಿ.ಕ್ಯಾಮರಾವನ್ನು ನೋಡಿದಾಗ ದೇವಸ್ಥಾನದ ಒಳಗೆ ಮೂವರು ಕಂಡುಬಂದಿದ್ದಾರೆ. ಕೂಡಲೇ ಅರ್ಚಕರು ದೇವಸ್ಥಾನದ ಮ್ಯಾನೇಜರ್ ಅವರಿಗೆ ವಿಚಾರ ತಿಳಿಸಿದ್ದಾರೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಮೂವರು ದೇವಸ್ಥಾನದ ಒಳಗೆ ಇದ್ದು, ನನಗೆ ಒಬ್ಬನಿಗೆ ಹೋಗಲು ಹೆದರಿಕೆ ಆಗುತ್ತಿದ್ದು ಅವರನ್ನು ಬರುವಂತೆ ತಿಳಿಸಿದ್ದಾರೆ. ಕೂಡಲೇ ಅವರು ಇಲ್ಲಿಗೆ ಬಂದರಾದರೂ ಅದಾಗಲೇ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಕಳ್ಳರು ಚಪ್ಪಲಿ ಧರಿಸದೆ ಗರ್ಭಗುಡಿಯೊಳಗೆ ಪ್ರವೇಶ ಮಾಡಿ, ಅಲ್ಲಿಂದ ಚಿನ್ನಾಭರಣಗಳನ್ನು ಕಳವು ಮಾಡುವ ದೃಶ್ಯ ಕಂಡು ಬಂತು. ಇದನ್ನು ಖಚಿತಪಡಿಸಿಕೊಂಡ ಬಳಿಕ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ಹರೀಶ್ ಮತ್ತು ಮೂರ್ತಿ ಭೇಟಿ ನೀಡಿದ್ದಾರೆ. ಜೊತೆಗೆ ಶ್ವಾನದಳ ಮತ್ತು ಬೆರಳಚ್ಚುತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ವ್ಯಕ್ತಿಗೆ ಹಲ್ಲೆ ನಡೆಸಿ ಚಾಕುವಿನಿಂದ ಇರಿಯಲು ಯತ್ನ

Next Post

ಮಂಗಳೂರು: ತುಂಬೆ ಹೆದ್ದಾರಿಯಲ್ಲಿ ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ

Related Posts

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕ್ರೈಮ್ ನ್ಯೂಸ್

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
49
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ
ಕ್ರೈಮ್ ನ್ಯೂಸ್

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
17
Next Post
ಮಂಗಳೂರು: ತುಂಬೆ ಹೆದ್ದಾರಿಯಲ್ಲಿ ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ

ಮಂಗಳೂರು: ತುಂಬೆ ಹೆದ್ದಾರಿಯಲ್ಲಿ ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ

Discussion about this post

Recent News

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
49
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d