ಬೆಂಗಳೂರು: ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಸುಮಾರು ಎರಡೂವರೆ ವರ್ಷಗಳ ಹಿಂದೆ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ಬೆಳಗ್ಗೆ ರಾಜ್ಯದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು PTI ವರದಿ ಮಾಡಿದೆ. ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ 16 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು 2022ರ ಜು.26ರಂದು ರಾತ್ರಿ 8 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಪ್ರಕರಣದ ತನಿಖೆಗೆ ಆರಂಭದಲ್ಲಿ ಪೊಲೀಸ್ ಇಲಾಖೆ ವಿಶೇಷ ತಂಡಗಳನ್ನು ರಚಿಸಿತ್ತು. ಬಳಿಕ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 19 ಆರೋಪಿಗಳ ಬಂಧನ ಕೂಡಾ ಆಗಿದೆ. ಇದೀಗ ತನಿಖೆಯ ಮುಂದುವರಿದ ಭಾಗವಾಗಿ ಎನ್ಐಎ ಇಂದು ರಾಜ್ಯದ 16 ಕಡೆಗಳಲ್ಲಿ ದಾಳಿ ನಡೆಸಿದೆ.
ಹಲವು ಬಾರಿ ಸಿದ್ದಿಕ್ ಮನೆಗೆ ನೋಟೀಸ್ ಕೊಟ್ಟಿದ್ದ ಅಧಿಕಾರಿಗಳು ಇದೀಗ ಮತ್ತೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 2022ರ ಜುಲೈ 26ರಂದು ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post