• About us
  • Contact us
  • Disclaimer
Friday, March 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಖ್ಯಾತ ಹಿರಿಯ ಸಾಹಿತಿ ನಾ.ಡಿ’ಸೋಜಾ ಮಂಗಳೂರಿನಲ್ಲಿ ನಿಧನ

Coastal Times by Coastal Times
January 6, 2025
in ಕರಾವಳಿ
ಖ್ಯಾತ ಹಿರಿಯ ಸಾಹಿತಿ ನಾ.ಡಿ’ಸೋಜಾ ಮಂಗಳೂರಿನಲ್ಲಿ ನಿಧನ
22
VIEWS
WhatsappTelegramShare on FacebookShare on Twitter

ಶಿವಮೊಗ್ಗ: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ನಾ. ಡಿಸೋಜ (87) ಅವರು ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಕುರಿತು ಅವರ ಪುತ್ರ ನವೀನ್ ಡಿಸೋಜ ಅವರು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ನಿವಾಸಿಯಾದ ನಾ. ಡಿಸೋಜ ಅವರು ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇವರನ್ನು ಮಂಗಳೂರಿನ ಪಾಧರ್ ಮಿಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿ ಸುಮಾರು 7:50 ರ ಸುಮಾರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ನಾ. ಡಿಸೋಜ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾಹ್ನ ಸಾಗರಕ್ಕೆ ತಂದು, ಅಲ್ಲಿನ ಗಾಂಧಿ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಜನವರಿ 7 ರಂದು ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಾ. ಡಿಸೋಜ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಕೃಷಿ ಮಾಡಿದ್ದ ಇವರು ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇವರ ಪೂರ್ಣ ಹೆಸರು ನಾರ್ಬರ್ಟ್​ ಡಿಸೋಜ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ 1937 ರ ಜೂನ್ 6 ರಂದು ಜನಿಸಿದ್ದರು.

ಕಾದಂಬರಿ ರಚನೆ: ಪರಿಸರ ಕಾಳಜಿಯುಳ್ಳ ಸಾಹಿತಿಯಾಗಿದ್ದರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯ ಒಳಗೊಂಡಂತೆ ಎಲ್ಲಾ ಸಾಹಿತ್ಯ ಪ್ರಾಕಾರಗಳಲ್ಲೂ ಕೃಷಿ ನಡೆಸಿದ್ದಾರೆ. ಮೊದಲು ಇವರು ಪ್ರಪಂಚ ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. ಡಿಸೋಜ ಅವರು 1964 ರಲ್ಲಿ ತಮ್ಮ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟಿಸಿದರು. ನಂತರ ಮಂಜಿನ ಕಾನು, ಈ ನೆಲ ಈಜಲ, ಕೆಂಪು ತ್ರಿಕೋನ, ನೆಲೆ, ಮಾನವ – ಹೀಗೆ ಸುಮಾರು 75 ಕಾದಂಬರಿಗಳನ್ನು ಬರೆದಿದ್ದಾರೆ. 6 ಚಾರಿತ್ರಿಕ ಕಾದಂಬರಿ, 25 ಮಕ್ಕಳ ಕಾದಂಬರಿ, 9 ಕಥಾ ಸಂಕಲನ, ಸಮಗ್ರ ಕಥೆಗಳ ಎರಡು ಸಂಪುಟಗಳು, ಸುಮಾರು 550 ಕಥೆಗಳು, ಹಲವು ನಾಟಕಗಳು, ರೇಡಿಯೋ ನಾಟಕಗಳು, ಅನೇಕ‌ ಪತ್ರಿಕಾ‌ ಲೇಖನಗಳನ್ನು ಬರೆದಿದ್ದಾರೆ. ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ.. ಹೀಗೆ ಹತ್ತು ಹಲವು ವಿಷಯಗಳನ್ನೊಳಗೊಂಡ ಅವರ ಕಾದಂಬರಿಗಳು ಹೆಚ್ಚು ಜನಪ್ರಿಯವಾಗಿವೆ.

ಚಲನಚಿತ್ರವಾದ ಕಾದಂಬರಿಗಳು: ದ್ವೀಪ, ಮುಳುಗಡೆ, ಕಾಡಿನ ಬೆಂಕಿ, ಬಳುವಳಿ, ಬೆಟ್ಟದ ಪುರದ ದಿಟ್ಟ ಮಕ್ಕಳು, ಆಂತರ್ಯ ಕಾದಂಬರಿಗಳು ಚಲನಚಿತ್ರವಾಗಿವೆ. ಇದರಲ್ಲಿ ಗಿರೀಶ್ ಕಾರಸವಳ್ಳಿ ಅವರ ನಿರ್ದೇಶನದ ದ್ವೀಪ ರಾಷ್ಟ್ರೀಯ ಪ್ರಶಸ್ತಿ ಗಳಿಸಿದೆ. ಭಾರತದ ಖ್ಯಾತ ನಟಿ ಸೌಂದರ್ಯ ಅವರು ಈ ಚಿತ್ರದಲ್ಲಿ ನಟಿಸಿ ರಾಷ್ಟ್ರೀಯ ಉತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದರು.

ಅಜ್ಞಾತ, ಒಂದು ಜಲಪಾತದ ಸುತ್ತ, ಕೈತಾನ್ ಗಾಂಧಿಯ ಸ್ವಾತಂತ್ರ್ಯ ಹೋರಾಟ, ಜೀವಕಳೆ, ಪ್ರೀತಿಯೊಂದೆ ಸಾಲದೇ?, ಬಂಜೆ ಬೆಂಕಿ, ಪ್ರಜ್ಞಾಬಲಿ, ನೆಲೆ, ನಡುವೆ ನಿಂತ ಜನ, ಗಾಂಧಿ ಬಂದರು, ಒಡ್ಡು, ಮಾನವ, ಮುಳುಗಡೆ, ವಿಷಾನಿಲ ಇನ್ನೂ ಅನೇಕ ಕಾದಂಬರಿಗಳನ್ನೊಳಗೊಂಡತೆ ಮಕ್ಕಳ ಸಾಹಿತ್ಯವನ್ನೂ ನಾ.ಡಿಸೋಜ ರಚಿಸಿದ್ದಾರೆ.

ಪ್ರಶಸ್ತಿಗಳು: ಕೇಂದ್ರ ಸಾಹಿತ್ಯ ಅಕಾಡಮಿಯ ಬಾಲ ಸಾಹಿತ್ಯ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗುಲ್ವಾಡಿ ವೆಂಕಟರಾವ ಪ್ರಶಸ್ತಿ, ಪುತ್ತೂರು ನಿರಂಜನ ಸಾಹಿತ್ಯ ಪ್ರಶಸ್ತಿ ವರ್ಧಮಾನ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ, ನವದೆಹಲಿ ಕಳಾ ಪ್ರಶಸ್ತಿ ಸೇರಿ ಇನ್ನೂ ಅನೇಕ ಪುರಸ್ಕಾರಗಳಿಗೆ ಇವರು ಭಾಜನರಾಗಿದ್ದರು.  2014 ರಲ್ಲಿ ಮಡಕೇರಿಯಲ್ಲಿ ನಡೆದ 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇವರು ಆಯ್ಕೆ ಆಗಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ನಕಲಿ ದಾಖಲೆ ಸೃಷ್ಟಿಸಿ, ಫೋರ್ಜರಿ ಸಹಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Next Post

ಮನೆಯಲ್ಲಿ ತಯಾರಿಸಿದ ಹರ್ಬಲ್ ಹೇರ್ ಪ್ಯಾಕ್: ಕೂದಲು ಬಿಳಿಯಾಗೋದು, ಉದುರುವುದನ್ನು ತಡೆಯುತ್ತೆ

Related Posts

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.
ಕರಾವಳಿ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
30
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
ಕರಾವಳಿ

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
27
Next Post
ಮನೆಯಲ್ಲಿ ತಯಾರಿಸಿದ ಹರ್ಬಲ್ ಹೇರ್ ಪ್ಯಾಕ್: ಕೂದಲು ಬಿಳಿಯಾಗೋದು, ಉದುರುವುದನ್ನು ತಡೆಯುತ್ತೆ

ಮನೆಯಲ್ಲಿ ತಯಾರಿಸಿದ ಹರ್ಬಲ್ ಹೇರ್ ಪ್ಯಾಕ್: ಕೂದಲು ಬಿಳಿಯಾಗೋದು, ಉದುರುವುದನ್ನು ತಡೆಯುತ್ತೆ

Discussion about this post

Recent News

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
25
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d