ಮುಂಬೈ: ಗಾನಕೋಗಿಲೆ ಲತಾ ಮಂಗೇಶ್ಕರ್ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.
92 ವರ್ಷದ ಲತಾ ಮಂಗೇಶ್ಕರ್ ಕೋವಿಡ್ ಸೋಂಕಿನ ಸೌಮ್ಯ ಲಕ್ಷಣ ಕಂಡುಬಂದು ಕಳೆದ ಜನವರಿ 8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು. ಕೆಲ ದಿನಗಳ ನಂತರ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ ಇಂದು ಮತ್ತೆ ಹದಗೆಟ್ಟು ವೆಂಟಿಲೇಟರ್ ನೆರವು ಒದಗಿಸಲಾಗಿದೆ.
ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಭಾರತದ ನೈಟಿಂಗೇಲ್(ಗಾನ ಕೋಗಿಲೆ) ಎಂದು ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರಿಗೆ ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣ, ದಾದಾ ಸಾಹೇಬ್ ಫಾಲ್ಕೆ ಸೇರಿದಂತೆ ಹತ್ತು ಹಲವು ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.
ಅವರು ಹಾಡಿದ ‘ಲಗ್ ಜಾ ಗಲೇ’, ‘ಯೇ ಗಲಿಯಾನ್ ಯೇ ಚೌಬಾರಾ’, ‘ಪ್ಯಾರ್ ಕಿಯಾ ತೊ ಡರ್ನಾ ಕ್ಯಾ’, ‘ಬಹೋನ್ ಮೇ ಚಲೇ ಆವೋ’, ‘ವೀರ್ ಜರಾ’ದ ‘ತೇರೆ ಲಿಯೇ’ ಮತ್ತು ಇನ್ನೂ ಅನೇಕ ಹಾಡುಗಳು ಜನಪ್ರಿಯವಾಗಿವೆ.
Discover more from Coastal Times Kannada
Subscribe to get the latest posts sent to your email.
Discussion about this post