• About us
  • Contact us
  • Disclaimer
Tuesday, April 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತಿಲ ಪರಿವಾರ-ಬಿಜೆಪಿ ವಿಲೀನಕ್ಕೆ ಹಲವು ಷರತ್ತು, 3 ದಿನ ಗಡುವು, ಮಂಡಲಾಧ್ಯಕ್ಷ ಸ್ಥಾನಕ್ಕೆ ಪಟ್ಟು

Coastal Times by Coastal Times
February 6, 2024
in ರಾಜಕೀಯ
ಪುತ್ತಿಲ ಪರಿವಾರ-ಬಿಜೆಪಿ ವಿಲೀನಕ್ಕೆ ಹಲವು ಷರತ್ತು, 3 ದಿನ ಗಡುವು, ಮಂಡಲಾಧ್ಯಕ್ಷ ಸ್ಥಾನಕ್ಕೆ ಪಟ್ಟು
89
VIEWS
WhatsappTelegramShare on FacebookShare on Twitter

ಮಂಗಳೂರು, (ಫೆ 05): ಪುತ್ತಿಲ ಪರಿವಾರ ಕಟ್ಟಿಕೊಂಡು ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಮೂಡಿಸಿರುವ ಹಿಂದೂ ಕಾರ್ಯಕರ್ತ ಅರುಣ್ ಪುತ್ತಿಲ ಅವರು ಇದೀಗ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ. ಆದ್ರೆ, ಇಂದು ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರ ಸಮಾಲೋಚನಾ ಸಭೆಯಲ್ಲಿ, ಬಿಜೆಪಿ ಜತೆ ವಿಲೀನಕ್ಕೆ ಹಲವು ಷರತ್ತುಗಳನ್ನು ಹಾಕಿದೆ. ಲೋಕಸಭಾ ಚುನಾವಣೆಗೂ ಮುನ್ನ ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹಿಂದೂ ಕಾರ್ಯಕರ್ತ ಅರುಣ್ ಪುತ್ತಿಲ ಹಾಗೂ ಪುತ್ತಿಲ ಪರಿವಾರ ಬೇಡಿಕೆ ಇಟ್ಟಿದೆ.

ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಒಟ್ಟು ಸೇರಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವುದು ಪರಿವಾರದ ಪ್ರಧಾನ ಬೇಡಿಕೆ. ಜತೆಗೆ ಪದಾಧಿಕಾರಿಗಳಲ್ಲೂ ಅವಕಾಶ ನೀಡಬೇಕು ಎಂದು ಕೋರಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್‌ ಕುಮಾರ್‌ ಪುತ್ತಿಲ ಅವರು 62 ಸಾವಿರ ಮತಗಳನ್ನು ಪಡೆದಿದ್ದರು. ಅವರು ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ವಿರುದ್ಧ ಸಣ್ಣ ಅಂತರದಿಂದ ಸೋತಿದ್ದರು. ಬಿಜೆಪಿ ದೂರದ ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಗಿ ಬಂದಿತ್ತು.

ಷರತ್ತಿನ ಜತೆಗೆ ಎಚ್ಚರಿಕೆಯನ್ನೂ ನೀಡಿದ ಪುತ್ತಿಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 718 ವಾಟ್ಸಾಪ್ ಗ್ರೂಪ್ ಗಳಲ್ಲಿ 4,23,400 ಜನ ಬೆಂಬಲಿಗರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಾದರೇ ದೊಡ್ಡ ಸಂಗತಿಯೇ ಇಲ್ಲ, ವ್ಯವಸ್ಥೆಗಳ ಅಗತ್ಯವೂ ಇಲ್ಲ. ಆದರೂ ಅದನ್ನು ಬಿಟ್ಟು ಬಿಜೆಪಿ ಜತೆ ಕೈಜೋಡಿಸಲು ಮುಂದಾಗಿದ್ದೇವೆ. ನಾವೆಲ್ಲ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ರಕ್ತವನ್ನು ಬೆವರು ಮಾಡಿ ಮಾತೃ ಪಕ್ಷವನ್ನು‌ ಅಧಿಕಾರಕ್ಕೆ ತರಲು ದುಡಿದಿದ್ದೇವೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಗೌರವ ತರುವ ವ್ಯವಸ್ಥೆಗಳು ಸುಸೂತ್ರವಾಗಿ‌ ನಡೆಯಬೇಕು ಇದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ಕೆಲವು ತೀರ್ಮಾನಗಳನ್ನ‌ ತೆಗೊಂಡಿದ್ದಾರೆ ಅವರ ನಿರ್ಧಾರಕ್ಕೆ ನಾನು ಕಟಿಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಮಾತೃ ಪಕ್ಷದವರು ಈ ಬಗ್ಗೆ ಸೂಕ್ತ ನಿರ್ಧಾರ ಮೂರು ದಿನಗಳೊಳಗೆ ಕೈಗೊಳ್ಳಬೇಕು. ಇಲ್ಲದಿದ್ದರೆ ಚುನಾವಣಾ ರಾಜಕೀಯಕ್ಕೆ ಪುತ್ತಿಲ ಪರಿವಾರ ಸಿದ್ಧವಾಗಿದೆ. ಕಾರ್ಯಕರ್ತರ ಭಾವನೆಗಳಿಗೆ ಸೂಕ್ತವಾದ ನಿರ್ಧಾರವನ್ನು ಮಾತೃ ಪಕ್ಷ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪುತ್ತೂರಿನಲ್ಲಿ ನಡೆದ ವಿದ್ಯಾಮಾನಗಳು ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಪರೋಕ್ಷವಾಗಿ ಬಿಜೆಪಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಏ ಕೆ ಕುಕ್ಕಿಲರ ‘ಮುಸ್ಲಿಮರನ್ನು ಕಟಕಟೆಯಲ್ಲಿ ನಿಲ್ಲಿಸುವ 6 ಪ್ರಶ್ನೆಗಳು’- ಪುಸ್ತಕ ಬಿಡುಗಡೆ

Next Post

ಬೆಳ್ತಂಗಡಿ: ಪಟಾಕಿ ಗೋದಾಮು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್​

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
52
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
42
Next Post
ಬೆಳ್ತಂಗಡಿ: ಪಟಾಕಿ ಗೋದಾಮು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್​

ಬೆಳ್ತಂಗಡಿ: ಪಟಾಕಿ ಗೋದಾಮು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್​

Discussion about this post

Recent News

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
153
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d