• About us
  • Contact us
  • Disclaimer
Sunday, March 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

“ಉಕ್ರೇನ್ ನಲ್ಲಿ ನಮ್ಮನ್ನು ರಕ್ಷಿಸಿದ್ದು ತ್ರಿವರ್ಣ ಧ್ವಜ”: ಹೀನಾ ಫಾತಿಮಾ

Coastal Times by Coastal Times
March 6, 2022
in ಕರಾವಳಿ
“ಉಕ್ರೇನ್ ನಲ್ಲಿ ನಮ್ಮನ್ನು ರಕ್ಷಿಸಿದ್ದು ತ್ರಿವರ್ಣ ಧ್ವಜ”: ಹೀನಾ ಫಾತಿಮಾ
34
VIEWS
WhatsappTelegramShare on FacebookShare on Twitter

ಬೆಳ್ತಂಗಡಿ:  ಬದುಕಲು ಬೇಕಿದ್ದುದು ಧೈರ್ಯ, ಸಾಹಸವಷ್ಟೆ ಹೊರತಾಗಿ ಬೇರೇನಿಲ್ಲ. ಬಂಕರ್ ನಲ್ಲಿ 7 ದಿನ ಕಳೆದು ಕ್ಷಿಪಣಿ ದಾಳಿಗಳನ್ನು ಕಣ್ಣೆದುರೇ ಕಂಡು ಒಂದೇ ಸಮನೆ ತಾಯ್ನಾಡಿನತ್ತ ಮರಳುವ ತವಕದಲ್ಲಿ ಜೀವ ಉಳಿಯಲು ಕಾರಣವಾಗಿದ್ದು ಭಾರತೀಯ ತ್ರಿವರ್ಣ ಧ್ವಜ” ಇದು ಯುದ್ಧಪೀಡಿತ ಉಕ್ರೇನ್ ಭೂಮಿಯಿಂದ ಉಜಿರೆಗೆ ತಲುಪಿದ ವೈದ್ಯಕೀಯ ವಿದ್ಯಾರ್ಥಿ ಹೀನಾ ಫಾತಿಮಾ ಅವರ ಅನುಭವ ಮಾತುಗಳು.

ಯುದ್ಧಗ್ರಸ್ತ ಉಕ್ರೇನ್ ನಿಂದ ಬೆಳ್ತಂಗಡಿ ತಾಲೂಕಿನ ಟಿ.ಬಿ.ಕ್ರಾಸ್ ನಿವಾಸಿ ದಿ.ಯಾಸೀನ್ ಮತ್ತು ಶಹನಾ ದಂಪತಿ ಪುತ್ರಿ ಹೀನಾ ಫಾತಿಮಾ ಅವರು ಮಾ.6 ರಂದು ಮಧ್ಯಾಹ್ನ 11 ಗಂಟೆಗೆ ಉಜಿರೆ ತಮ್ಮ ನಿವಾಸಕ್ಕೆ ತಲುಪಿದ ಬಳಿಕ ಉಕ್ರೇನ್ ನ ಆತಂಕದ ದಿನಗಳ ವಿಚಾರ‌ವನ್ನು ಹಂಚಿಕೊಂಡರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಹೀನಾ ಫಾತೀಮಾ, ಭಾರತ ದೇಶದ ತ್ರಿವರ್ಣ ಧ್ವಜ ನಮ್ಮ ಪ್ರಾಣ ಉಳಿಸಿತು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯವಾಗಿ ಬಣ್ಣವನ್ನು ಪಡೆದುಕೊಂಡು ಖಾಲಿ ಹಾಳೆಯಲ್ಲಿ ಬಣ್ಣ ಬಳಿದು ರಾಷ್ಟ್ರ ಧ್ವಜವನ್ನು ತಯಾರಿಸಿ ಅದನ್ನು ಹಿಡಿದುಕೊಂಡು ಹಲವು ಕಿಲೋ ಮೀಟರ್ ನಾವು ನಡೆದುಕೊಂಡು ಬಂದೆವು. ಈ ಸಂದರ್ಭದಲ್ಲಿ ಸಮೀಪದಲ್ಲಿ ಬಾಂಬ್ ದಾಳಿಯಾಗುತ್ತಿತ್ತು. ಆದರೆ, ನಮ್ಮ ಕೈಯಲ್ಲಿದ್ದ ರಾಷ್ಟ್ರ ಧ್ವಜ ಪ್ರಾಣ ರಕ್ಷಕವಾಯಿತು ಎಂದು ಹೀನಾ ಫಾತೀಮಾ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಖಾರ್ಕಿವ್, ಕೀವ್ ನಲ್ಲಿ ಉಕ್ರೇನ್ ನಾಗರಿಕರಿಗೆ ಮೊದಲ ಆಧ್ಯತೆ ನೀಡಲಾಗುತ್ತಿತ್ತು. ಉಳಿದಂತೆ ಮಹಿಳೆಯರಿಗೆ ಅವಕಾಶವಿತ್ತು. ಅದರಂತೆ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ರೈಲನ್ನೇರಿ ತುಂಬಿದ ಜನಸ್ತೋಮದಿಂದ ನಗರವನ್ನು ತೊರೆದೆವು. ಆದರೆ, ಅಲ್ಲಿ ಹುಡುಗರಿಗೆ ಅವಕಾಶ ನೀಡಲಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಇನ್ನು ಹುಡುಗರು ಮತ್ತೆ 30 ಕಿ.ಮೀ. ದೂರ ಕಾಲ್ನಡಿಗೆಯಲ್ಲೇ ನಡೆದುಕೊಂಡು ಬಂದಿದ್ದರು. ಅವರು ಬರುವ ವೇಳೆ ದಾರಿಯುದ್ದಕ್ಕೂ ಬಾಂಬ್ ದಾಳಿ ನಡೆಯುತ್ತಿತ್ತು. ಕೆಲವು ಕಟ್ಟಡಗಳು ಕೂಡ ಬಾಂಬ್ ದಾಳಿಗೆ ಒಳಗಾಗಿತ್ತು ಎಂದಿದ್ದಾರೆ.
“ಭಾರತೀಯ ಎಂಬಸಿ ಅಲ್ಲಿಂದ ಮನೆವರೆಗೆ ತಲುಪವವರೆಗೆ ನಮ್ಮನ್ನು ಮನೆ ಮಕ್ಕಳಂತೆ ಆರೈಕೆ ಮಾಡಿದೆ. ಊಟ, ಉಪಚಾರ ವಸತಿ ಪ್ರತಿಯೊಂದು ವ್ಯವಸ್ಥೆ ಕಲ್ಪಿಸಿದೆ. ನಮ್ಮನ್ನು ತಾಯ್ನಾಡಿಗೆ ಕರೆತರುವಲ್ಲಿ ನೆರವಾದ ಎಲ್ಲರಿಗೂ ನಾನು ಅಭಾರಿ” ಎಂದ ಹೀನಾ ಕಣ್ಣಂಚಿನಲ್ಲಿ ಆನಂದ ಬಾಷ್ಪವಿತ್ತು.

ಇನ್ನು ಕನ್ನಡಿಗೆ ನವೀನ್ ಮೃತಪಟ್ಟ ಬಳಿಕ ಎಲ್ಲರ ಆತಂಕ ಹೆಚ್ಚಾಗಿತ್ತು. ಆದರೆ, ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇವರೆಲ್ಲರ ಸಹಕಾರದಿಂದ ಸುರಕ್ಷಿತವಾಗಿ ಮರಳಲು ಸಾಧ್ಯವಾಯಿತು ಎಂದು ಹೀನಾ ಫಾತೀಮಾ ಪ್ರತಿಕ್ರಿಯೆ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ತಿರುವನಂತಪುರಂ: ವಿವಾಹಿತ ಸ್ನೇಹಿತನೊಂದಿಗೆ ಹೋಟೆಲ್ ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವು

Next Post

ಪುದುಚೇರಿಯ ಪ್ರಖ್ಯಾತ ರಾಕ್‌ ಬೀಚ್‌ನಲ್ಲಿನ ಹಡಗುಕಟ್ಟೆ ಕುಸಿತ

Related Posts

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ
ಕರಾವಳಿ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
12
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ
ಕರಾವಳಿ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
19
Next Post
ಪುದುಚೇರಿಯ ಪ್ರಖ್ಯಾತ ರಾಕ್‌ ಬೀಚ್‌ನಲ್ಲಿನ ಹಡಗುಕಟ್ಟೆ ಕುಸಿತ

ಪುದುಚೇರಿಯ ಪ್ರಖ್ಯಾತ ರಾಕ್‌ ಬೀಚ್‌ನಲ್ಲಿನ ಹಡಗುಕಟ್ಟೆ ಕುಸಿತ

Discussion about this post

Recent News

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
33
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
417
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d