ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಅವರು ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದ ಮನೆಯಲ್ಲಿದ್ದ ಅವರಿಗೆ ಮಂಗಳವಾರ ಸಂಜೆ 6 ಗಂಟೆ ವೇಳೆಗೆ ಕೊಂಚ ಸುಸ್ತು ಕಾಣಿಸಿಕೊಂಡಿತ್ತು. ತಪಾಸಣೆಗಾಗಿ ಎ.ಜೆ. ಆಸ್ಪತ್ರೆಗೆ ಬಂದಿದ್ದು, ಆರೋಗ್ಯದ ಬಗ್ಗೆ ನಿಗಾವಹಿಸಲು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
78 ವರ್ಷ ದಾಟಿದರೂ ಆರೋಗ್ಯದಲ್ಲಿ ಲವಲವಿಕೆಯಿಂದ ಇದ್ದರೂ ಭಟ್ ಅವರು ಯುವಕರೇ ನಾಚುವಂತೆ ಆರೋಗ್ಯ ಕಾಪಡಿಕೊಂಡಿದ್ದರು. ಆರ್.ಎಸ್.ಎಸ್ ಹಿರಿಯ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ , ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತಿದ್ದಾರೆ.
ಅವರ ಆರೋಗ್ಯ ಸ್ಥಿರವಾಗಿದೆ. ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.