ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುತ್ತಿರುವ ಹಂತದಲ್ಲಿ ಶಾಸಕರೊಬ್ಬರ ಕಾಮಕೇಳಿಯ ಚಿತ್ರಗಳು ವೈರಲ್ ಆಗಿವೆ. ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಬ್ಬರ ಜತೆ ಆತ್ಮೀಯವಾಗಿರುವ ಭಂಗಿಯ ಚಿತ್ರಗಳು ಓಡಾಡಲು ಶುರುವಾಗಿದ್ದು, ಇದು ಆಡಳಿತ ಪಕ್ಷಕ್ಕೆ ದೊಡ್ಡ ಮುಜುಗರವನ್ನು ಉಂಟು ಮಾಡಲಿದೆ.
ಎ.5ರಂದು ಫೋಟೋ ವೈರಲ್ ಆಗುತ್ತಿದ್ದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ತನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.

34 ನೆಕ್ಕಿಲಾಡಿಯ ನಿವಾಸಿಯಾಗಿರುವ ಈ ಮಹಿಳೆಯು ನನ್ನ ಪೋಟೋದೊಂದಿಗೆ ಬೇರೆಯವರೊಬ್ಬರ ಪೋಟೋವನ್ನು ವಿಭಿನ್ನ ರೀತಿಯಲ್ಲಿ ಜೋಡಿಸಿ, ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಇಲ್ಲಿ ಅಸಹ್ಯ ಹಾಗೂ ಅಶ್ಲೀಲವಾಗಿ ನನ್ನನ್ನು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ನನ್ನ ಘನತೆಗೆ ಕುಂದುಂಟುಮಾಡುವ ಕಾರ್ಯ ನಡೆದಿದೆ. ಆದ್ದರಿಂದ ಈ ರೀತಿ ಮಾಡಿರುವ ಅಪರಿಚಿತ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಪ್ರಕರಣವು ಪುತ್ತೂರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಗೆ ಇದು ನುಂಗಲಾರದ ತುತ್ತಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
Discover more from Coastal Times Kannada
Subscribe to get the latest posts sent to your email.








Discussion about this post