ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇದೇ 7ರಂದು ಮಧ್ಯಾಹ್ನ 1ಕ್ಕೆ ಮೂಲ್ಕಿ ಸಮೀಪದ ಕೊಳ್ನಾಡು ಮೈದಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮ೦ಗಳೂರು ನಗರ ಉತ್ತರ, ಮ೦ಗಳೂರು ನಗರ ದಕ್ಷಿಣ, ಮೂಡುಬಿದಿರೆ ವಿಧಾನಸಭಾ ಕ್ಷೇತ್ರಗಳಿ೦ದ 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗೆ ಇದೇ ಮೊದಲ ಬಾರಿ ಆಗಮಿಸುತ್ತಿದ್ದು ಪ್ರಿಯಾಂಕಾ ಅವರಿಗೆ ಭವ್ಯ ಸ್ವಾಗತ ಕೋರಲಾಗುವುದು ಎಂದರು.
ಡಬಲ್ ಎಂಜಿನ್ ಸರ್ಕಾರ ರಾಜ್ಯಕ್ಕೆ ಅಗತ್ಯವೇ ಇಲ್ಲ. ಈಗಾಗಲೇ ಒಂದು ಎಂಜಿನ್ ದುರಸ್ತಿ ಆಗದೇ ಕೆಟ್ಟು ನಿಂತಿದೆ ಎಂದು ಅವರು ಲೇವಡಿ ಮಾಡಿದರು. ಕರಾವಳಿಯೂ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಪಡೆದು ಬಹುಮತದ ಸರ್ಕಾರ ರಚನೆ ಮಾಡಲಿದೆ. ಕಾಂಗ್ರೆಸ್ ಸರ್ಕಾರದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಕರಾವಳಿ ಭಾಗಕ್ಕೆ ರೂಪಿಸಿರುವ ಪ್ರತ್ಯೇಕ ಪ್ರಣಾಳಿಕೆಯಲ್ಲಿಯ ಹತ್ತು ಅಂಶಗಳನ್ನು ಹಾಗೂ 6 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಕಾಂಗ್ರೆಸ್ ಬದ್ಧ. ಜನಪರವಾದ, ಜನರು ಮೆಚ್ಚುವ ಸರ್ಕಾರವನ್ನು ಕಾಂಗ್ರೆಸ್ ನೀಡಲಿದೆ ಎಂದರು.
ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಸಿಡಬ್ಲುಸಿ ಸದಸ್ಯ ಡಾ.ಅಜಯ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್, ಸಂತೋಷ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post