ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿರುವ ಶಾಲಾ-ಕಾಲೇಜುಗಳನ್ನು ಆಗಸ್ಟ್ 23ರಿಂದ ಆರಂಭಿಸಲು ನಿರ್ಧರಿಸಲಾಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದೇ 23ರಿಂದ 9, 10, 11, 12 ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. 2ನೇ ಹಂತದಲ್ಲಿ 6, 7 ಮತ್ತು 8ನೇ ತರಗತಿ ಆರಂಭಿಸಲಾಗುವುದು. ಕರೊನಾ ಪರಿಸ್ಥಿತಿ ಅವಲೋಕಿಸಿ ಆಗಸ್ಟ್ ಕೊನೆಯ ವಾರದಲ್ಲಿ ಒಂದರಿಂದ 8ನೇ ತರಗತಿಗಳ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ದಿನ ಬಿಟ್ಟು ದಿನ ತರಗತಿಗಳು ನಡೆಸಲು ಒಪ್ಪಿಗೆ ಸಿಕ್ಕಿದ್ದು, ವಿವರ ಮಾರ್ಗಸೂಚಿ ಇಂದೇ ಹೊರಡಿಸಲಾಗುವುದು ಎಂದಿದ್ದಾರೆ.
ಬ್ಯಾಚ್ ವೈಸ್ ಶಾಲೆ ಆರಂಭಿಸಲು ನಿರ್ಧರಿಸಿರುವ ಸರ್ಕಾರ ಮುಂದೆ ಕೊರೋನಾ ತೀವ್ರತೆಯನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಪ್ರಾಥಮಿಕ ಶಾಲಾ ಆರಂಭಿಸುವ ಸಂಬಂಧ ಆಗಸ್ಟ್ ಕೊನೆಯ ವಾರಾದಲ್ಲಿ ಸಭೆ ನಡೆಸಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.