• About us
  • Contact us
  • Disclaimer
Sunday, August 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಶೇಖ್​ ಹಸೀನಾ

Coastal Times by Coastal Times
August 6, 2024
in ರಾಷ್ಟ್ರೀಯ ಸುದ್ದಿ
ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಶೇಖ್​ ಹಸೀನಾ
40
VIEWS
WhatsappTelegramShare on FacebookShare on Twitter

ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಹೋರಾಟಕ್ಕೆ ಪ್ರಧಾನಿ ಶೇಖ್​ ಹಸೀನಾ ತಲೆದಂಡವಾಗಿದೆ. ಇಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಅವರು ದೇಶ ತೊರೆದಿದ್ದಾರೆ. ಸೇನೆಯ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ ಮಾಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ವಕಾರ್ ಉಜ್ ಜಮಾನ್ ಹೇಳಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಷ್ಟ್ರವ್ಯಾಪಿ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಿ. ಸರ್ಕಾರವನ್ನು ವಜಾ ಮಾಡಲಾಗಿದೆ. ಸೇನಾಡಳಿತ ಇರಲಿದೆ. ಇಂದು ರಾತ್ರಿಯೊಳಗೆ ಎಲ್ಲ ಪ್ರತಿಭಟನಾಕಾರರು ಹೋರಾಟ ಹಿಂಪಡೆದು ವಾಪಸ್​ ತೆರಳಬೇಕು” ಎಂದು ಮನವಿ ಮಾಡಿದ್ದಾರೆ.

15 ವರ್ಷಗಳ ಶೇಖ್ ಹಸೀನಾ ಆಡಳಿತ ಅಂತ್ಯ: ಶೇಖ್​ ಹಸೀನಾ ಅವರ ರಾಜೀನಾಮೆಯಿಂದಾಗಿ ಅವಾಮಿ ಲೀಗ್​​ನ 15 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಳೆದ ಮೂರು ಚುನಾವಣೆಗಳಲ್ಲಿ ಶೇಖ್​ ಹಸೀನಾ ಅವರ ನೇತೃತ್ವದ ಅವಾಮಿ ಲೀಗ್​ ಸತತವಾಗಿ ಅಧಿಕಾರಕ್ಕೆ ಬಂದಿದೆ. ಈ ವರ್ಷ ನಡೆದ ಚುನಾವಣೆಯು ಭಾರೀ ವಿವಾದಕ್ಕೂ ಕಾರಣವಾಗಿತ್ತು. ಆದಾಗ್ಯೂ ಅವಾಮಿ ಲೀಗ್​ ಭಾರೀ ಅಂತರದಲ್ಲಿ ಜಯ ಸಾಧಿಸಿತ್ತು.

ಬಾಂಗ್ಲಾ ಸಂಘರ್ಷಕ್ಕೇನು ಕಾರಣ?: ಬಾಂಗ್ಲಾದೇಶ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ನಿವೃತ್ತ ಯೋಧರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 30ರಷ್ಟು ಮೀಸಲಿಡುವ ವಿವಾದಾತ್ಮಕ ಕಾನೂನನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಎರಡು ತಿಂಗಳ ಹಿಂದೆ ನಡೆದ ಹೋರಾಟದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿ ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದಾದ ಬಳಿಕ ಘರ್ಷಣೆಗಳು ಭುಗಿಲೆದ್ದಿವೆ. ಅಂದಿನಿಂದ, 11,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

“ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿ. ಪ್ರತಿಭಟನಾಕಾರರು ಸೇನೆಯ ಮೇಲೆ ನಂಬಿಕೆ ಇಡಿ. ಸಂಘರ್ಷ ಮತ್ತು ಅದರಿಂದಾಗುವ ಹಾನಿ ತಪ್ಪಿಸಿ. ಆಕ್ಷೇಪಗಳ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳೋಣ. ದೇಶದ ಒಳಿತಿಗಾಗಿ ಸಹಾಯ ಮಾಡಿ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು. ದೇಶದಾದ್ಯಂತ ಕರ್ಫ್ಯೂ ವಿಧಿಸುವ ಅಥವಾ ತುರ್ತು ಪರಿಸ್ಥಿತಿ ಘೋಷಿಸುವ ಅಗತ್ಯವಿಲ್ಲ” ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪಬ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಪುತ್ತೂರಿನ ನಾಲ್ವರು ಯುವಕರ ಬಂಧನ

Next Post

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

Related Posts

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ
ರಾಷ್ಟ್ರೀಯ ಸುದ್ದಿ

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

August 4, 2026
39
ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ
ರಾಷ್ಟ್ರೀಯ ಸುದ್ದಿ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
68
Next Post
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

Discussion about this post

Recent News

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
63
ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d