ಬೆಂಗಳೂರು: ತಮಿಳುನಾಡು ಸಚಿವ ದಯಾನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ,‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ’ ಎಂದು ಬಹುಭಾಷಾ ನಟ ಪ್ರಕಾಶ್ ರೈ ಅವರು ಮಂಗಳವಾರ ಹೇಳಿದ್ದಾರೆ.
ಇಂದು ನಗರದ ಟೌನ್ ಹಾಲ್ನಲ್ಲಿ ನಡೆದ ಗೌರಿನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ ನಟ, ನಾನು ಟ್ವಿಟರ್ನಲ್ಲಿ ‘ಸನಾತನಿ ಸಂಸತ್’ ಎಂದು ಪೋಸ್ಟ್ ಮಾಡಿದ್ದೆ. ಅದಕ್ಕೆ, ‘ನಿನ್ನದು ಸನಾತನ ಧರ್ಮ ಅಲ್ವಾ’ ಎಂದು ಒಬ್ಬ ಪ್ರಶ್ನೆ ಕೇಳಿದ. ಅದಕ್ಕೆ ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ. ನನ್ನ ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ ಎಂದು ಉತ್ತರಿಸಿರುವುದಾಗಿ ಹೇಳಿದರು.
ನಾನು ಯಾವುದೇ ಧರ್ಮದ ವಿರುದ್ಧ ಇಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇದ್ದೇನೆ. ಅವರು ಸಂಸತ್ ಭವನದ ಉದ್ಘಾಟನೆ ವೇಳೆ ಹೋಮ ಹವನ ಮಾಡಿಸಿದರು. ಅದು ನಮ್ಮ ಸಂಸತ್ ಭವನ. ಅದರಲ್ಲಿ ಹೋಮ ಹವನ ಮಾಡಬಾರದು. ಯಾವುದನ್ನೂ ಸಹ ನಮ್ಮ ಮೇಲೆ ಬಲವಂತವಾಗಿ ಹೇರಬಾರದು. ಆದರೆ, ಮೋದಿಯಿಂದ ಅದು ಆಗುತ್ತಿದೆ, ಅದಕ್ಕೆ ನನ್ನ ವಿರೋಧವಿದೆ ಎಂದು ಪ್ರಕಾಶ್ ರೈ ತಿಳಿಸಿದ್ದಾರೆ.
Discussion about this post