ಮಂಗಳೂರು,ಸೆ.6: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ನಗರದ ವೆಲೆನ್ಸಿಯಾದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ.
ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಅವರ ಜೊತೆಗೆ ಸಚಿವರು ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.
ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಬದಲಿಗೆ 15 ದಿನಕ್ಕೆ ಕೋಳಿ ಮಾಂಸಾಹಾರ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. 5 ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲಿ ಆರೋಪಿಸಿದರು. ತತ್‌ಕ್ಷಣ ಸಚಿವರು ತಾಲೂಕು ವಿಸ್ತರಣೆ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದರು. ಡಿಎಂಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್‌ಗೆ ಶೋಕಾಸ್ ನೋಟಿಸ್ ನೀಡಲು ಸೂಚಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post