• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು| ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ

Coastal Times by Coastal Times
October 6, 2023
in ಕರಾವಳಿ
ಮಂಗಳೂರು| ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ
29
VIEWS
WhatsappTelegramShare on FacebookShare on Twitter

ಮಂಗಳೂರು. ಅ.5 : “ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬಗಳಾಗಿದ್ದು, 1939 ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್ ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದು, 2023 ನವೆಂಬರ್ 4 – 5 ಎರಡು ದಿನ, ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ದೇಶದ ವಿವಿಧ ಭಾಗಗಳಿಂದ ಸುಮಾರು 800 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ವಿನಾಯತಿ ನೀಡಲಾಗಿದೆ. 

ಪ್ರತಿನಿಧಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದ್ದು ಒನ್‌ಲೈನ್ ಮೂಲಕ ನೋಂದಣಿ ಆರಂಭಿಸಲಾಗಿದೆ. ” ಎಂದು 25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಂಕಣಿ ಕವಿ, ಚಿಂತಕ, ರಾಹುಲ್ ಎಡ್ವಟೈಸರ್ಸ್ ಮಾಲಕ ಟೈಟಸ್ ನೊರೊನ್ಹಾ ಮಾಹಿತಿ ನೀಡಿದರು. 

25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು. ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ಸಂಸ್ಥೆಯ ಸಂಚಾಲಕ ಖ್ಯಾತ ಕಲಾವಿದ ಪಿಂಟೊ ವಾಮಂಜೂರ್ ಸಮ್ಮೇಳನದ ಲಾಂಛನವನ್ನು ತಯಾರಿಸಿದ್ದಾರೆ.

ಹಿರಿಯ ಪತ್ರಕರ್ತ, 1974 ರಲ್ಲಿ ಕರ್ನಾಟಕದಲ್ಲಿ ಕೊಂಕಣಿ ಭಾಷಾ ಮಂಡಳದ ಸ್ಥಾಪನೆಗಾಗಿ ಶ್ರಮಿಸಿದ, ಶ್ರೀಮತಿ ವಿಮಲಾ ವಿ. ಪೈ ಜೀವನ ಸಿದ್ದಿ ಪ್ರಶಸ್ತಿ ಪುರಸ್ಕೃತ, ರಾಕ್ಕೊ ಪತ್ರಿಕೆಯ ವಿಶ್ರಾಂತ ಸಂಪಾದಕ ಫಾ| ಮಾರ್ಕ್ ವಾಲ್ಡರ್ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದರು.

ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ನೊ) ಅಧ್ಯಕ್ಷ ಅಲ್ವಿನ್ ಡಿ’ಸೋಜಾ, ಪಾನೀರ್ ಕ್ಯೂ ಆರ್ ಕೋಡ್ ಮೂಲಕ ಒನ್‌ಲೈನ್ ನೋಂದಣಿಗೆ ವಿಧ್ಯುಕ್ತ ಚಾಲನೆ ನೀಡಿದರು.

ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಮಾಹಿತಿ ಪುಸ್ತಕ ಬಿಡುಗಡೆ ಮಾಡಿದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಗೋಕುಲದಾಸ ಪ್ರಭು ನೋಂದಣಿ ಪುಸ್ತಕ ಬಿಡುಗಡೆ ಮಾಡಿದರು. ಅಖಿಲ ಭಾರತ ಕೊಂಕಣಿ ಪರಿಷತ್ ಅಧ್ಯಕ್ಷ ಅರುಣ್ ಉಭಯ್‌ಕರ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಪತ್ರಕರ್ತ ಎಚ್. ಎಂ. ಪೆರ್ನಾಲ್ ಸ್ವಾಗತಿಸಿ ಅತಿಥಿಗಳ ಪರಿಚಯ ಮಾಡಿದರು. ಸಾಹಿತ್ಯ ಅಕಾಡೆಮಿ, ಹೊಸದಿಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ವಿಶ್ವ ಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಬಂಟ್ವಾಳ್‌ಕರ್ ವಂದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೃಹತ್‌ ಹೆಬ್ಬಾವಿಗೆ ಐದು ದಿನಗಳ ಸತತ ಚಿಕಿತ್ಸೆ, ಮರುಜನ್ಮ ನೀಡಿದ ಮಂಗಳೂರಿನ ವೈದ್ಯರ ತಂಡ

Next Post

ಮಕ್ಕಳ ಜೊತೆ ಬೆರೆತ ಮಂಗಳೂರು ಪೊಲೀಸ್ ಕಮಿಷನರ್

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
227
Next Post
ಮಕ್ಕಳ ಜೊತೆ ಬೆರೆತ ಮಂಗಳೂರು ಪೊಲೀಸ್ ಕಮಿಷನರ್

ಮಕ್ಕಳ ಜೊತೆ ಬೆರೆತ ಮಂಗಳೂರು ಪೊಲೀಸ್ ಕಮಿಷನರ್

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d