• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ | ಶಿಕ್ಷಕಿ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಇಷ್ಟು ಸಣ್ಣ ವಯಸ್ಸಲ್ಲಿ ಇಷ್ಟೊಂದು ಕ್ರಿಮಿನಲ್‌ ಐಡಿಯಾ!

Coastal Times by Coastal Times
October 6, 2023
in ಕ್ರೈಮ್ ನ್ಯೂಸ್
ಉಳ್ಳಾಲ | ಶಿಕ್ಷಕಿ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಇಷ್ಟು ಸಣ್ಣ ವಯಸ್ಸಲ್ಲಿ ಇಷ್ಟೊಂದು ಕ್ರಿಮಿನಲ್‌ ಐಡಿಯಾ!
872
VIEWS
WhatsappTelegramShare on FacebookShare on Twitter

ಉಳ್ಳಾಲ : ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ  ಕಡಿಮೆ ಅಂಕ ನೀಡಿದರೆಂಬ ದ್ವೇಷಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು  ಗಣಿತ ಶಿಕ್ಷಕಿಯ  ನೀರಿನ ಬಾಟಲಿಗೆ ಅವಧಿ ಮುಗಿದ ಮಾತ್ರೆ ಹಾಕಿದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಮಾತ್ರೆ ಬೆರೆತ ನೀರನ್ನು ಸೇವಿಸಿದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ.

ಉಳ್ಳಾಲದ ಖಾಸಗಿ ಶಾಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಇದೀಗ ಶಾಲೆಯ ಆಡಳಿತ ಮಂಡಳಿ ತುರ್ತು ಎಸ್ ಡಿಎಂಸಿ ಸಭೆ ನಡೆಸಿ ವಿದ್ಯಾರ್ಥಿನಿಯರಿಬ್ಬರಿಗೆ ಟಿ.ಸಿ ನೀಡಲು ನಿರ್ಧರಿಸಿದೆ. ಶಾಲೆಯಲ್ಲಿ ನಡೆಯುವ ಘಟಕ ಪರೀಕ್ಷೆಯ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಅಲ್ಲದೇ ಸರಿಯಿದ್ದ ಉತ್ತರಕ್ಕೆ ಶಿಕ್ಷಕಿ ತಪ್ಪು ಹಾಕಿದ್ದಾರೆ ಅನ್ನುವ ದ್ವೇಷವೂ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು.

ಇದರ ಸೇಡು ತೀರಿಸುವ ಸಲುವಾಗಿ ತನ್ನ ಸ್ನೇಹಿತೆಯೊಬ್ಬಳ ಸಹಾಯ ಪಡೆದುಕೊಂಡ ಆರನೇ ತರಗತಿ ವಿದ್ಯಾರ್ಥಿನಿ ಶಿಕ್ಷಕಿಯ ನೀರಿನ ಬಾಟಲಿಗೆ ಮಾತ್ರೆ ಹಾಕಲು ಪ್ಲ್ಯಾನ್‌ ಮಾಡಿದ್ದಳು. ಅದರಂತೆ ಎಲ್ಲಿಂದಲೋ ಅವಧಿ ಮುಗಿದ ಮಾತ್ರೆಗಳನ್ನು ತಂದಿದ್ದಳು. ಸ್ಟಾಫ್ ರೂಮ್ ನಲ್ಲಿ ಶಿಕ್ಷಕಿಯರಿಲ್ಲದ ಸಂದರ್ಭ ನೋಡಿಕೊಂಡು ಇಬ್ಬರೂ ವಿದ್ಯಾರ್ಥಿನಿಯರು ಸೇರಿ ಗಣಿತ ಶಿಕ್ಷಕಿಗೆ ಸೇರಿದ ವಾಟರ್ ಬಾಟಲಿಗೆ ತಾವು ತಂದ ಮಾತ್ರೆಗಳನ್ನು ಹಾಕಿದ್ದಾರೆ. ಇದೇ ಬಾಟಲಿಯ ನೀರನ್ನು ಗಣಿತ ಶಿಕ್ಷಕಿ ಜತೆ ಇನ್ನೋರ್ವ ಶಿಕ್ಷಕಿಯೂ ಕುಡಿದಿದ್ದಾರೆ.

ಸ್ವಲ್ಪ ಹೊತ್ತಿನಲ್ಲಿ ಶಿಕ್ಷಕಿಯೊಬ್ಬರಿಗೆ ಅಸ್ವಸ್ಥತೆ ಕಂಡುಬಂದಿದೆ. ಇನ್ನೋರ್ವ ಶಿಕ್ಷಕಿಗೆ ಮುಖದಲ್ಲಿ ಊತ ಉಂಟಾಗಿದೆ. ನೀರಿನ ರುಚಿಯಲ್ಲಿ ಬದಲಾವಣೆ ಕಂಡುಬಂದು ಸೂಕ್ಷ್ಮವಾಗಿ ಗಮನಿಸಿದಾಗ ನೀರಲ್ಲಿ ಮಾತ್ರೆಗಳಿರುವುದು ಕಂಡುಬಂದಿದೆ. ಈ ಕುರಿತು ವಿಚಾರಿಸಿ ಸಿಸಿಟಿವಿ ಗಮನಿಸಿದಾಗ ವಿದ್ಯಾರ್ಥಿನಿಯರ ಕೃತ್ಯ ಬೆಳಕಿಗೆ ಬಂದಿದೆ.

ಸಣ್ಣ ವಯಸ್ಸಿನಲ್ಲಿ ಇಷ್ಟೊಂದು ಕಾರುಬಾರು ಮಾಡುವ ವಿದ್ಯಾರ್ಥಿನಿಯ ನಡೆಗೆ ಇಡೀ ಶಾಲಾ ಆಡಳಿತ ಮಂಡಳಿ, ಹೆತ್ತವರು ನಿಬ್ಬೆರಗಾಗಿದ್ದಾರೆ‌. ಖಾಸಗಿ ವಿದ್ಯಾಸಂಸ್ಥೆಗಳು ಶಿಕ್ಷಣವನ್ನು ವ್ಯಾವಹಾರಿಕ ಮತ್ತು ಸ್ಪರ್ಧಾತ್ಮಕ ರೀತಿ ನಡೆಸುತ್ತಿರುವುದು, ಪೋಷಕರು ಮಕ್ಕಳನ್ನ ರ್ಯಾಂಕ್ ಮೆಷಿನ್ ಗಳಂತೆ ಬಿಂಬಿಸುತ್ತಿರುವುದರ ಪರಿಣಾಮ ಇಂತಹ ಕೃತ್ಯಗಳನ್ನ ವಿದ್ಯಾರ್ಥಿಗಳು ನಡೆಸುತ್ತಿದ್ದಾರೆ ಎಂಬ ಕಳವಳ ಉಂಟಾಗಿದೆ. ಕೃತ್ಯವೆಸಗಿದ ವಿದ್ಯಾರ್ಥಿನಿಯರನ್ನು ಶಾಲಾಡಳಿತವು ತರಾತುರಿಯಲ್ಲಿ ಟಿ.ಸಿ ಕೊಟ್ಟು ಡಿಬಾರ್ ಮಾಡಲು ಮುಂದಾಗಿದ್ದು ಆ ಮೂಲಕ ಶಾಲೆಯ ಮಾನ ಕಾಪಾಡಲು ಹೊರಟಿದೆ.

ಪ್ರಕರಣ ಕಾನೂನು ವ್ಯಾಪ್ತಿಗೆ ಬಂದರೆ ಮಾತ್ರ ಕಾನೂನಿನೊಂದಿಗೆ ಸಂಘರ್ಷ ಮೆರೆದ ಅಪ್ರಾಪ್ತ ವಿದ್ಯಾರ್ಥಿನಿಯರನ್ನ ಸಲಹಾ ಕೇಂದ್ರದಲ್ಲಿ ಸಮಾಲೋಚನೆ ನಡೆಸಲು ಸಾಧ್ಯ. ಸದ್ಯ ಪೊಲೀಸ್ ದೂರು ದಾಖಲಾಗಿಲ್ಲ. ಶಿಕ್ಷಣ ಇಲಾಖೆಯೂ ಪ್ರಕರಣವನ್ನು ಗಂಭೀರ ಪರಿಗಣಿಸಿ ವಿಚಾರಣೆ ನಡೆಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದ ಆರೋಪಿ ರೋಶನ್‌ ಮಸ್ಕರೇನಸ್‌ನ ಬಂಧನ

Next Post

ಮೂಡಬಿದ್ರೆ | ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ, ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ

Related Posts

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್
ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
277
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
173
Next Post
ಮೂಡಬಿದ್ರೆ | ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ, ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ

ಮೂಡಬಿದ್ರೆ | ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ, ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
13
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d