ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಲ್ಎಸ್ಡಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಾರು ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್ ಮತ್ತು ಮಹಮ್ಮದ್ ನಿಹಾಲ್ ಬಂಧಿತರು. ಖಚಿತ ಮಾಹಿತಿ ಆಧಾರದಲ್ಲಿ ಮೂಲ್ಕಿ ಪಿಎಸ್ಐ ಅನಿತಾ ಎಚ್.ಬಿ. ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳು ಮಂಗಳೂರು ಹೊರವಲಯದ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post