ಉಪ್ಪಿನಂಗಡಿ, ನ.6: ನವವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ.
ಮೃತರನ್ನು ನಾಸಿರ್ (27) ಎಂದು ಗುರುತಿಸಲಾಗಿದ್ದು, ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದೆ. ಕಳೆದ ಆದಿತ್ಯವಾರವಷ್ಟೇ ನಾಸೀರ್ ವಿವಾಹವಾಗಿತ್ತು. ಹೀಗಾಗಿ ಈತನ ಸಾವಿನ ಸುತ್ತ ಹಲವು ಅನುಮಾನಗಳು ಕಾಡಿದ್ದು ಸ್ಥಳಕ್ಕೆ ಪೂಂಜಾಲಕಟ್ಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಿದೆ.
Discussion about this post