ಮಂಗಳೂರು: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ಕೊಟ್ಟ ಹಾಗೂ ಇನ್ನೊಬ್ಬ ಬಾಲಕಿಯನ್ನು ಅತ್ಯಾಚಾರಗೈದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಮೂವರನ್ನು ಬಂಧಿಸಲಾಗಿದೆ.
ರಿಜ್ವಾನ್, ಮಹಮ್ಮದ್ ಕಾಸಿಂ ಮತ್ತು ಅಜ್ಮಲ್ ಹುಸೇನ್ ಎಂಬವರು ಬಂಧಿತ ಆರೋಪಿಗಳು. ಇವರನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ರಿಕ್ಷಾ ಚಾಲಕನಾಗಿರುವ ರಿಜ್ವಾನ್ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದ ಫರಂಗಿಪೇಟೆಯಲ್ಲಿ ಬಾಲಕಿಯ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುತ್ತಾನೆ.
ಇದರ ಬೆನ್ನಲ್ಲೇ ನ.5ರಂದು ಅದೇ ಯುವತಿ ಮತ್ತೊಂದು ದೂರು ನೀಡಿದ್ದು, 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ಆಬಳಿಕ ತಾವಿದ್ದಲ್ಲಿಗೆ ಕರೆಸಿಕೊಂಡು ಅತ್ಯಾಚಾರ ನಡೆಸಿದ್ದರು. ಆನಂತರ ಈ ಬಗ್ಗೆ ಯಾರಿಗಾದರೂ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರು ನೀಡಿದ್ದಳು.
ಎರಡೂ ಘಟನೆಗಳ ಬಗ್ಗೆ 376, 506 ಜೊತೆಗೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಫರಂಗಿಪೇಟೆಯ ರಿಜ್ವಾನ್, ಅರ್ಕುಳದ ಮಹಮ್ಮದ್ ಖಾಸಿಂ, ಅಜ್ಮಲ್ ಹುಸೇನ್ ಎಂಬವರು ಬಂಧಿತರಾಗಿದ್ದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.a