• About us
  • Contact us
  • Disclaimer
Monday, May 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 – ಡಾ. ರಾಜೇಂದ್ರ ಕುಮಾರ್

Coastal Times by Coastal Times
November 6, 2023
in ಕರಾವಳಿ
ಮಂಗಳೂರಿನಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 – ಡಾ. ರಾಜೇಂದ್ರ ಕುಮಾರ್
30
VIEWS
WhatsappTelegramShare on FacebookShare on Twitter

ಮಂಗಳೂರು; ಮಂಗಳೂರಿನಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘‘ಸಾರ್ವಜನಿಕ – ಖಾಸಗಿ – ಸಹಕಾರಿ ಹಭಾಗಿತ್ವವನ್ನು ಬಲಪಡಿಸುವುದು’’ ಎಂಬ ವಿಷಯದೊಂದಿಗೆ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸ ಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ .ಎಂ.ಎನ್. ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.

ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮವನ್ನು ಈ ಬಾರಿ ಹಮ್ಮಿಕೊಳ್ಳಲಾಗಿದೆ ಎಂದವರು ಮಾಹಿತಿ ನೀಡಿದರು.

ಮಂಗಳೂರಿನಲ್ಲಿ ನವೆಂಬರ್ 18ರಂದು ನಡೆಯುವ ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆಗಳನ್ನುಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ನೆರವೇರಿ ಸಲಿದ್ದಾರೆ. ಸಹಕಾರ ಸಪ್ತಾಹದ ಉದ್ಘಾಟನೆ ಯನ್ನು ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ ಅವರು ನೆರವೇರಿಸಲಿ ರುವರು.‘‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ’’ವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನೆರವೇರಿಸಲಿದ್ದಾರೆ.

‘‘ಉತ್ತಮ ಸ್ವ-ಸಹಾಯ ಸಂಘ’’ಗಳಿಗೆ ಪುರಸ್ಕಾರವನ್ನುಸಂಸದರಾದ ನಳಿನ್‌ಕುಮಾರ್ ಕಟೀಲ್ ಅವರು ಪ್ರದಾನ ಮಾಡಲಿರುವರು. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಮಾನ್ಯ ಅಧ್ಯಕ್ಷರಾದ ಜಿ. ಟಿ. ದೇವೇಗೌಡ ನೆರವೇರಿಸಲಿರುವರು.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್.ರಾಜೇಂದ್ರ ಕುಮಾರ್‌ರವರು ವಹಿಸಲಿರುವರು. ‘‘ಸಹಕಾರ ಜಾಥಾ’’ ಉದ್ಘಾಟನೆಯನ್ನು ಶಾಸಕರಾದ ವೇದವ್ಯಾಸ್ ಡಿ. ಕಾಮತ್ ನೆರವೇರಿ ಸಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ಶಾಸಕರಾದ ಡಾ .ಭರತ್ ಶೆಟ್ಟಿ ವೈ., ಶಾಸಕರು ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು ಇದರ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಭಾಗವಹಿ ಸಲಿರುವರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ ಅವರು ಗೌರವ ಉಪಸ್ಥಿತರಿರುವರು.ವಿಶೇಷ ಆಹ್ವಾನಿತರಾಗಿ ಮಂಜುನಾಥ ಪ್ರಸಾದ್, (ಸರಕಾರದ ಪ್ರಧಾನ ಕಾರ್ಯದರ್ಶಿಗಳು, ಸಹಕಾರ ಇಲಾಖೆ,) ಕ್ಯಾಪ್ಟನ್ ಡಾ॥ ಕೆ. ರಾಜೇಂದ್ರ,(ಸಹಕಾರ ಸಂಘಗಳ ನಿಬಂಧಕರು, )ಮುಲ್ಲೈ ಮಗಿಲನ್ ಎಂ. ಪಿ(ದ.ಕಜಿಲ್ಲಾಧಿಕಾರಿ) ಅನುಪಮ್ ಅಗರ್‌ವಾಲ್,( ಮಂಗಳೂರು ಪೊಲೀಸ್ ಆಯುಕ್ತರು) ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ‘‘ಸಹಕಾರ ಜಾಥಾ’’ ಆಯೋಜನೆ ಮಾಡಲಾಗಿದ್ದು, ಪೂರ್ವಾಹ್ನ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್ ಮೈದಾನದವರೆಗೆ ಸಾಂಸ್ಕೃತಿಕ ಕಲಾಪ್ರಕಾರಗಳವಿವಿಧ ಟ್ಯಾಬ್ಲೋಗ ಳೊಂದಿಗೆ ನಡೆಯಲಿದೆ.70ನೇ ಅಖಿಲ ಭಾರತ ಸಹಕಾರ ಸಪ್ತಾಹದ 5ನೇ ದಿನವಾದ ನ.18ರಂದು ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಇಲ್ಲಿ ನಡೆಯುವ ರಾಜ್ಯ ಮಟ್ಟದ ವಿಶಿಷ್ಟ ಕಾರ್ಯಕ್ರಮದಲ್ಲಿ ಉಡುಪಿ, ದ.ಕ ಜಿಲ್ಲೆಯ ಎಲ್ಲಾ ಸಹಕಾರ ಸಂಸ್ಥೆಗಳು, ಸಹಕಾರಿಗಳು, ಸ್ವ-ಸಹಾಯಸಂಘದ ಸದಸ್ಯರು ಭಾಗವಹಿಸಿ, ಈ ಕಾರ್ಯ ಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಿ, ಸಹಕಾರ ಚಳುವಳಿಯನ್ನುಅರ್ಥಪೂರ್ಣವಾಗಿಸಲು ಎಲ್ಲರೂ ಸಹಕರಿಸ ಬೇಕು ಎಂದು ಡಾ ಎಂ. ಎನ್. ರಾಜೇಂದ್ರ ಕುಮಾರ್‌ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಡಾ. ದೇವಿಪ್ರಸಾದ್‌ ಶೆಟ್ಟಿ, ಶಶಿ ಕುಮಾರ್‌ ರೈ, ಸದಾಶಿವ ಉಳ್ಳಾಲ್‌, ರಾಜು ಪೂಜಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿಯೂನಿಯನ್ ಅಧ್ಯಕ್ಷರುಗಳಾದ ಬೆಳ್ಳಿಪಾಡಿ ಪ್ರಸಾದ್‌ ಕೌಶಲ್‌ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸ್ಕ್ಯಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳಿ ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ. ಉಮೇಶ್‌ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕೇರಳ ಬಾಂಬ್ ಸ್ಫೋಟ ; ಸಾವಿನ ಸಂಖ್ಯೆ 4ಕ್ಕೆ ಏರಿಕೆ, ಆರೋಪಿ ಡೊಮಿನಿಕ್ ಗೆ 10 ದಿನ ಪೊಲೀಸ್ ಕಸ್ಟಡಿ

Next Post

ಮಂಗಳೂರು ಫ‌ಳ್ನೀರ್‌ನ ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ

Related Posts

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ
ಕರಾವಳಿ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
98
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
Next Post
ಮಂಗಳೂರು ಫ‌ಳ್ನೀರ್‌ನ ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ

ಮಂಗಳೂರು ಫ‌ಳ್ನೀರ್‌ನ ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ

Discussion about this post

Recent News

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

May 3, 2026
18
ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

May 3, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

May 3, 2026
ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

May 3, 2026
ಬಂಟ್ವಾಳ : ಮಾದಕ ವಸ್ತು MDMA ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

ಬಂಟ್ವಾಳ : ಮಾದಕ ವಸ್ತು MDMA ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

May 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d