ಮಂಗಳೂರು: ನಗರ ಕರ್ನಾಟಕ ಪಾಲಿಟೆಕ್ನಿಕ್‌ನ (ಕೆಪಿಟಿ) ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೋದ ಅಯ್ಯಪ್ಪ ಮಾಲಾಧಾರಿ ಎಬಿವಿಪಿ ಮುಖಂಡನಿಗೆ ಸಂಸ್ಥೆಯ ಪ್ರಾಂಶುಪಾಲರೊಬ್ಬರು ಹಲ್ಲೆ ಮಾಡಿದ್ದಾರೆಂದು ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಸಂಸ್ಥೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕೆಪಿಟಿಯ ಕಟ್ಟಡಗಳು ಹದಗೆಟ್ಟಿರುವ ಬಗ್ಗೆ ಹಾಗೂ ಸಂಸ್ಥೆಯ ಉಪನ್ಯಾಸಕರ ವರ್ಗಾವಣೆಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ಚರ್ಚಿಸಲು ಪ್ರಾಂಶುಪಾಲರನ್ನು ಭೇಟಿಯಾಗಲು ಎಬಿವಿಪಿ ಮುಖಂಡರ ನಿಯೋಗವು ತೆರಳಿತ್ತು. ‘ನಮ್ಮ ಜೊತೆ ಚರ್ಚಿಸಲು ನಿರಾಕರಿಸಿದ್ದ ಪ್ರಾಂಶುಪಾಲ ಹರೀಶ್ ಶೆಟ್ಟಿ ಅವರು, ‘ಗೆಟ್ ಔಟ್’ ಎಂದು ಕೂಗಾಡಿ ಅನುಚಿತ ವರ್ತನೆ ತೋರಿದ್ದಾರೆ’ ಪ್ರಾಂಶುಪಾಲ ಹರೀಶ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಧರಣಿ ಮಾಡಿದ್ದಾರೆ. ಅಯ್ಯಪ್ಪ ಮಾಲೆಯನ್ನು ಧರಿಸಿದ್ದರೂ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಎಂದು ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.
‘ಪ್ರಾಂಶುಪಾಲರು ಕ್ಷಮೆ ಕೋರಬೇಕು’ ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಕೆಪಿಟಿ ಪ್ರಾಂಗಣದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ಮತ್ತಷ್ಟು ಸಿಟ್ಟಿಗೆದ್ದ ಪ್ರಾಂಶುಪಾಲರು, ‘ಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆಸಿ ನಿಮ್ಮನ್ನು ಹೊರಗೆ ಕಳುಹಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದರು. ಇದು ಪ್ರತಿಭಟನಾ ನಿರತ ಎಬಿವಿಪಿ ವಿದ್ಯಾರ್ಥಿಗಳನ್ನು ಮತ್ತಷ್ಟು ಕೆರಳಿಸಿತ್ತು. ಪೊಲೀಸರು ಮಧ್ಯಪ್ರವೇಶ ಮಾತನಾಡಿ ಪ್ರತಿಭಟನೆ ಕೈಬಿಡುವಂತೆ ಒತ್ತಾಯಿಸಿದರೂ ಅವರು ಒಪ್ಪಿರಲಿಲ್ಲ. ಪ್ರತಿಭಟನೆ ಸಂಜೆವರೆಗೂ ಮುಂದುವರಿದಿತ್ತು.

ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಶಾಸಕ ವೇದವ್ಯಾಸ ಕಾಮತ್, ಪ್ರಾಂಶುಪಾಲರ ಜೊತೆ ಮಾತುಕತೆ ನಡೆಸಿದರು. ನಡೆದ ಘಟನೆಗೆ ಪ್ರಾಂಶುಪಾಲರು ವಿಷಾದ ವ್ಯಕ್ತಪಡಿಸಿದ ಬಳಿಕ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ವಾಪಾಸ್ ಪಡೆದರು ಎಂದು ಗೊತ್ತಾಗಿದೆ. ಬಳಿಕ ವಿದ್ಯಾರ್ಥಿಗಳು ಕಾಲೇಜಿನಿಂದ ತೆರಳಿದ್ದಾರೆ.

Discover more from Coastal Times Kannada
Subscribe to get the latest posts sent to your email.







Discussion about this post