ಉಳ್ಳಾಲ: `ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿ, ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದರಿಂದ ಉಳ್ಳಾಲ ನಗರಸಭೆಯ ಸದಸ್ಯ ರವಿಚಂದ್ರ ಗಟ್ಟಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಾಂಗ್ರೆಸ್ ಅಮಾನತುಗೊಳಿಸಿದೆ.

ನಗರಸಭೆ ಸದಸ್ಯ ರವಿಚಂದ್ರ ಗಟ್ಟಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಪಾನಮತ್ತರಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮೈಮೇಲಿನ ಬಟ್ಟೆಗಳನ್ನು ಕಳಚಿ ಬಿದ್ದುಕೊಂಡಿದ್ದರು. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿರುತ್ತಾರೆ. ಈಚೆಗೆ ನಡೆದ ಉಳ್ಳಾಲ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಭಾಗವಹಿಸದೇ, ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನುತಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.


Discover more from Coastal Times Kannada
Subscribe to get the latest posts sent to your email.







Discussion about this post