ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಬಂದಿಳಿದಿದ್ದಾರೆ. ಧೋನಿ, ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಧೋನಿ ತಮ್ಮ ಸ್ನೇಹಿತ ಕಾಸರಗೋಡಿನ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ. ಕೆ.ಕೆ. ಅಬ್ದುಲ್ ಗಫಾರ್ ಅವರ ಆತ್ಮಕಥನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗುವ ಸಲುವಾಗಿ ಮಂಗಳೂರಿಗೆ ಬಂದಿಳಿದಿದ್ದಾರೆ. ಧೋನಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಅವರ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಇದಾದ ಬಳಿಕ ಭಾರಿ ಭದ್ರತೆಯೊಂದಿಗೆ ಧೋನಿ ಕಾಸರಗೋಡಿನತ್ತ ಪ್ರಯಾಣ ಬೆಳೆಸಿದರು.

ಮಹೇಂದ್ರ ಸಿಂಗ್ ಧೋನಿಯನ್ನು ಮಾಜಿ ಸಚಿವ ಯು.ಟಿ ಖಾದರ್ ಅವರ ಸಹೋದರ, ಯು.ಟಿ. ಇಫ್ತಿಕಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಾಸರಗೋಡಿನ ಬೇಕಲ್ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
Discover more from Coastal Times Kannada
Subscribe to get the latest posts sent to your email.








Discussion about this post