• About us
  • Contact us
  • Disclaimer
Tuesday, September 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

“ಪಿಲಿ” ತುಳು ಚಿತ್ರ ಈ ವಾರ ತೆರೆಗೆ!

Coastal Times by Coastal Times
February 7, 2023
in ಕರಾವಳಿ
“ಪಿಲಿ” ತುಳು ಚಿತ್ರ ಈ ವಾರ ತೆರೆಗೆ!
64
VIEWS
WhatsappTelegramShare on FacebookShare on Twitter

ಮಂಗಳೂರು: ಎನ್.ಎನ್.ಎಮ್. ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ “ಪಿಲಿ” ತೆರೆಗೆ ಬರಲು ಸಿದ್ಧವಾಗಿದೆ ಎಂದು ಸಿನಿಮಾದ ಛಾಯಾಗ್ರಾಹಕ ನಿರ್ದೇಶಕ ಮಯೂರ್ ಆರ್. ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದುಬೈನಲ್ಲಿ ಈಗಾಗಲೇ ಚಿತ್ರದ ಶೋ ನಡೆದಿದ್ದು, ಅಪಾರ ಜನ ಮೆಚ್ಚುಗೆ ಪಡೆದಿದೆ, ಭರತ್ ರಾಮ್ ರೈ ಸಹ-ನಿರ್ಮಾಕರಾಗಿರುವ ಈ ಸಿನಿಮಾಕ್ಕೆ ಭರವಸೆಯ ಯುವ ನಟ ಭರತ್ ಭಂಡಾರಿಯವರು ಕಥೆ ಬರೆದು, ಮೊದಲ ಬಾರಿಗೆ ನಾಯಕ ನಟನಾಗಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ ಇದಾಗಿದ್ದು ಈ ಚಿತ್ರದ ಛಾಯಾಗ್ರಹಣ ಮತ್ತು ನಿರ್ದೇಶನದ ಹೊಣೆಯನ್ನು ಹೊತ್ತಿರುವವರು ಮೈ ನೇಮ್ ಈಸ್ ಅಣ್ಣಪ್ಪ
ಚಿತ್ರದ ನಿರ್ದೇಶಕ, ಮಯೂರ್ ಆರ್.ಶೆಟ್ಟಿ, ಇವರು ಎಕ್ಕಸಕ, ಪಿಲಿಬೈಲ್ ಯಮುನಕ್ಕೆ ಸೇರಿದಂತೆ ಹಲವಾರು ತುಳು ಕನ್ನಡ ಚಿತ್ರಗಳಿಗೆ ಸಹನಿರ್ದೇಶಕರಾಗಿ, ಛಾಯಾಗ್ರಾಹಕರಾಗಿ, ಚಿತ್ರ ಸಾಹಿತಿಯಾಗಿ ಹೆಸರು ಮಾಡಿರುತ್ತಾರೆ.

ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ನಂಬಿಕೆಗಳಲ್ಲಿ ಒಂದಾಗಿರುವ ಹುಲಿ ಕುಣಿತದ ಕಥಾವಸ್ತುವನ್ನು ಹೊಂದಿರುವಂತಹ ಚಿತ್ರ ‘ಪಿಲಿ’ . ತುಳುನಾಡಿನಲ್ಲಿ ಹುಲಿಕುಣಿತಕ್ಕೆ ಅದರದ್ದೇ ಆದ ಗೌರವ ಮತ್ತು ಇತಿಹಾಸ ಇದೆ. ಆ ಗೌರವಕ್ಕೆ ಧಕ್ಕೆ ಬಂದಾಗ, ಆಚರಣೆಯಲ್ಲಿ ಆಗುವಂತಹ ಲೋಪಗಳಿಗೆ ಏನೆಲ್ಲ ದೋಷ, ದುರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎನ್ನುವುದನ್ನು ಈ ಚಿತ್ರದ ಮೂಲಕ ಬಹಳ ಸೊಗಸಾಗಿ
ಕಟ್ಟಿಕೊಡಲಾಗಿದೆ ಎಂದು ಚಿತ್ರತಂಡ ಹೇಳಿದೆ.

ಚಿತ್ರದಲ್ಲಿ ವಿಜಯ್‌ಕುಮಾರ್ ಕೊಡಿಯಾಲ್‌ಬೈಲ್ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ, ನಾಯಕನಾಗಿ ಭರತ್ ಭಂಡಾರಿ, ಜೊತೆಗೆ ಸ್ವಾತಿ ಶೆಟ್ಟಿ, ತ್ರಿಷಾ ಶೆಟ್ಟಿ, ಕೃತಿ ಶೆಟ್ಟಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್, ಸ್ವರಾಜ್ ಶೆಟ್ಟಿ, ಸಂತೋಷ್ ಶೆಟ್ಟಿ, ರೂಪ ಡಿ ಶೆಟ್ಟಿ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ ಸೇರಿದಂತೆ ಹಲವಾರು ಪ್ರಭುದ್ಧ ಕಲಾವಿದರು ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದಾರೆ.

ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಗಣೇಶ್ ನೀರ್ಚಾಲ್ ಅವರ ಸಂಕಲನ ಈ ಚಿತ್ರಕ್ಕಿದೆ. ಸುಂದರವಾದ ನಾಲ್ಕು ಹಾಡುಗಳಿಗೆ ಮಯೂರ್ ಆರ್. ಶೆಟ್ಟಿ, ಡಿ.ಬಿ.ಸಿ ಶೇಖರ್ ಮತ್ತು ಕೆ.ಕೆ. ಪೇಜಾವರ್ ಸಾಹಿತ್ಯ ಬರೆದಿದ್ದಾರೆ. ಈ ಚಿತ್ರಕ್ಕೆ ಸಂದೇಶ್ ಬಿಜೈ ಸಂಭಾಷಣೆ ಬರೆದಿದ್ದು, ನಿರ್ದೇಶನ ತಂಡದಲ್ಲಿ ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ, ಸಂದೇಶ್ ಬಿಜೈ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ. ಪ್ರಚಾರ ಕಲೆ ವಿನ್ಯಾಸ ದೇವಿ ರೈಯವರದ್ದಾಗಿದೆ. ತುಳುನಾಡಿನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಸೇರಿದಂತೆ ಮಂಗಳೂರಿನ ಸುತ್ತಮುತ್ತ ಇರುವಂತಹ ಹಲವಾರು ಸುಂದರ ತಾಣಗಳಲ್ಲಿ ಈ ಚಿತ್ರದ
ಚಿತ್ರೀಕರಣ ನಡೆದಿದ್ದು, ಚಿತ್ರ ಬಹಳ ಸುಂದರವಾಗಿ ಮೂಡಿಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕೊಂಕಣಿ ಸಾಹಿತ್ಯ ಪ್ರಶಸ್ತಿಗೆ ಕೊಂಕಣಿಯ ಖ್ಯಾತ ಲೇಖಕಿ ಐರಿನ್ ಪಿಂಟೊ ಆಯ್ಕೆ

Next Post

ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆ ಪ್ರಕರಣ ; ಪೋಷಕರ ಆಕ್ರೋಶ, ಸಿಟಿ ಆಸ್ಪತ್ರೆ ಮತ್ತು ಕಾಲೇಜು ಆಡಳಿತದ ವಿರುದ್ಧ FIR ದಾಖಲು

Related Posts

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ
ಕರಾವಳಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
0
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ
ಕರಾವಳಿ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
18
Next Post
ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆ ಪ್ರಕರಣ ; ಪೋಷಕರ ಆಕ್ರೋಶ, ಸಿಟಿ ಆಸ್ಪತ್ರೆ ಮತ್ತು ಕಾಲೇಜು ಆಡಳಿತದ ವಿರುದ್ಧ FIR ದಾಖಲು

ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆ ಪ್ರಕರಣ ; ಪೋಷಕರ ಆಕ್ರೋಶ, ಸಿಟಿ ಆಸ್ಪತ್ರೆ ಮತ್ತು ಕಾಲೇಜು ಆಡಳಿತದ ವಿರುದ್ಧ FIR ದಾಖಲು

Discussion about this post

Recent News

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
0
ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d