ಬಂಟ್ವಾಳ : ಬಾಲಕಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಡಿ ಯುವಕನೋರ್ವನ್ನು ವಿಟ್ಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಯಾನೆ ಕುಟ್ಟ ಬಂಧಿತ ಆರೋಪಿ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸಂಜೀವ ಎಂಬುವರು ತನ್ನ ಅಪ್ರಾಪ್ತ ವಯಸ್ಸಿನ ಮಗಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆಗೆ ಸಾಹುಲ್ ಹಮೀದ್ ಎಂಬಾತ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಉಪಾಧೀಕ್ಷಕ ಶಿವಾಂಶು ರಜಪೂತ್ ನೇತೃತ್ವದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು. ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ಗುರುವಾರ ರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post