ಮಂಗಳೂರು, ಜೂ. 7: ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಅಶೋಕ್ (32) ಮಂಗಳವಾರ ರಾತ್ರಿ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ
2022ರ ಜುಲೈನಿಂದ ಮಂಗಳೂರು ಕಾರಾಗೃಹದಲ್ಲಿದ್ದ. ಆಗಲೇ ಆತ ಮಧುಮೇಹ, ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಎ.13ಕ್ಕೆ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದವನು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ. ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post