ಅಂಕೋಲ(ಉತ್ತರ ಕನ್ನಡ ಜಿಲ್ಲೆ) ಆ.07 : ಕಾರು ಅಫಘಾತವಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ಮೃತಪಟ್ಟು ಇತರ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.
ನೆರೆ ಪರಿಸ್ಥಿತಿ ಹಾಗೂ ಕೋವಿಡ್ ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಭೆ ಕರೆಯಲಾಗಿತ್ತು, ಸಭೆಗೆ ಆಗಮಿಸುವ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅಂಕೋಲ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.