ಉಳ್ಳಾಲ, ಆ 06 : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 12 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು ಮತ್ತು ಅದನ್ನ ಮಾರಾಟಕ್ಕೆ ಬಳಸಿದ್ದ ಆಟೋರಿಕ್ಷಾ, ಎರಡು ಮೊಬೈಲ್ ಗಳನ್ನ ಪೊಲೀಸರು ವಶಪಡಿಸಿದ್ದಾರೆ. ಒಟ್ಟು 95,000 ಮೌಲ್ಯದ ಸೊತ್ತುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅಶೋಕ್, ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ರವರ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್,ಅಶೋಕ್, ಮಂಜುನಾಥ್ ರವರುಗಳು ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ.ಆರೋಪಿ ಹಲವು ವರ್ಷಗಳಿಂದ ತನ್ನ ರಿಕ್ಷಾವನ್ನು ಕೂಡ ಅಪರಿಮಿತ ವೇಗದಿಂದ ಚಲಾಯಿಸುತ್ತಿದ್ದು, ಹಲವು ರೀತಿಯ ಅಪಘಾತಗಳು ಸ್ವಲ್ಪ ಅಂತರದಲ್ಲಿ ತಪ್ಪಿದೆ.
Discover more from Coastal Times Kannada
Subscribe to get the latest posts sent to your email.
Discussion about this post