ಬಂಟ್ವಾಳ, ಆ.6: ಬಿ.ಸಿ ರೋಡ್ ಬಳಿಯ ಎನ್.ಜಿ. ಸರ್ಕಲ್ ಎಂಬಲ್ಲಿ, ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಬರುತ್ತಿದ್ದ ಟಿಪ್ಪರ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಹಿಂಬದಿ ಸವಾರ ಮೃತಪಟ್ಟ ಘಟನೆ ನಡೆದಿದ್ದು ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಿಪ್ಪರ್ ಚಾಲಕ ಬಂಟ್ವಾಳ ಪಲ್ಲಮಜಲು ನಿವಾಸಿ ಸಲ್ಮಾನ್ ಫಾರುಕ್ (33) ಎಂಬಾತ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿದ್ದು ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಪಡಿಸಿದ್ದಾನೆ ಎನ್ನಲಾಗಿದೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಅಪಘಾತದಲ್ಲಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಸವಾರ ದಯಾನಂದ ಹಾಗೂ ಸಹ ಸವಾರ ಯಶ್ವಂತ್ ಕುಲಾಲ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹ ಸವಾರ ಯಶ್ವಂತ್ ಕುಲಾಲ್ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸವಾರ ದಯಾನಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಅ.ಕ್ರ: 99/2026, ಕಲಂ: 281, 125 (ಎ), 106 (1) ) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆರೋಪಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post