• About us
  • Contact us
  • Disclaimer
Saturday, April 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿದ ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ..!

Coastal Times by Coastal Times
September 7, 2023
in ಕರಾವಳಿ
ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿದ ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ..!
268
VIEWS
WhatsappTelegramShare on FacebookShare on Twitter

ಉಡುಪಿ :ಎಲ್ಲೆಲ್ಲೂ ಕೃಷ್ಣಾಷ್ಟಮಿಯ ಸಂಭ್ರಮ, ಸಡಗರ. ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈ ಸಂದರ್ಭ ನಡೆಯುತ್ತವೆ. ಭಗವಾನ್ ಶ್ರೀಕೃಷ್ಣ ಮಥುರಾದಲ್ಲಿ ಮಧ್ಯರಾತ್ರಿ ಜನಿಸಿದ್ದು ಇತಿಹಾಸ. ಅದೇ ಮಧ್ಯರಾತ್ರಿಯ ಸಮಯ, ಅದೇ ಗಳಿಗೆಯಲ್ಲಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶಾಸಕರೊಬ್ಬರು ದೈವ ಸಂಕಲ್ಪ ಎಂಬಂತೆ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದರು. ಅವಿಭಜಿತ ದ.ಕ. ಜಿಲ್ಲೆಯ 13 ಶಾಸಕರ ಪೈಕಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉಡುಪಿ ಮಠಕ್ಕೆ ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾದ ಏಕೈಕ ಶಾಸಕ.

ಮಠದ ಸತ್ಯನಾರಾಯಣ ಭಟ್ ಅವರು ಸ್ಪೀಕರ್ ಅವರನ್ನು ಬರಮಾಡಿಕೊಂಡರು. ಮಠದ ಕೊಳದಲ್ಲಿ ಕೈ ಕಾಲು ತೊಳೆದು ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು.

ಬುಧವಾರ ಬೆಳಿಗ್ಗೆ ಬೆಂಗಳೂರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಬಂದು ತನ್ನ ಕ್ಷೇತ್ರದಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯ ಕಡಿಯಾಲಿನಲ್ಲಿ ಪ್ರಸಾದ್ ಕಾಂಚನ್ ನೇತೃತ್ವದಲ್ಲಿ ಶಶಿರಾಜ್ ಕುಂದರ್ ಮತ್ತು ತಂಡದಿಂದ ಟೈಗರ್ ಫ್ರೆಂಡ್ಸ್ ನ ಹುಲಿವೇಷ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ವಿಶೇಷವೆಂದರೆ ಕಾಕತಾಳೀಯವೆಂಬಂತೆ ಭೇಟಿ ನೀಡಿದ ಅದೇ ಗಳಿಗೆಯಲ್ಲಿ ಶ್ರೀಕೃಷ್ಣ ಜನ್ಮ ತಾಳಿದ್ದರು ಎಂದು ಮಠದ ಸತ್ಯನಾರಾಯಣ ಭಟ್ ಉಲ್ಲೇಖಿಸಿದರು. ಈ ಭಾಗ್ಯ ಎಲ್ಲರಿಗೂ ಪ್ರಾಪ್ತವಾಗದು. ಎರಡೂ ಜಿಲ್ಲೆಯ 13 ಶಾಸಕರ ಪೈಕಿ 11 ಮಂದಿ ಬಿಜೆಪಿ ಶಾಸಕರಿದ್ದರೂ ಅವರ್ಯಾರಿಗೂ ಸಿಗದ ಭಾಗ್ಯ ಸ್ಪೀಕರ್ ಖಾದರ್ ಗೆ ಲಭಿಸಿದ್ದು ಕಾಕತಾಳೀಯ. ಎಲ್ಲ ಧರ್ಮವನ್ನು ಸಮಾನವಾಗಿ ಗೌರವಿಸುವ ಸೌಹಾರ್ದದ ಹರಿಕಾರ ಯು.ಟಿ.ಖಾದರ್ ಗೆ ಇಂತಹ ವಿಶೇಷ ಸಿಕ್ಕಿದ್ದು ಅವರ ಜೀವನದ ಅವಿಸ್ಮರಣೀಯ ಕ್ಷಣಗಳಲ್ಲೊಂದು ಎನ್ನಬಹುದು. 6 ಗಂಟೆಗೆ ಹುಲಿವೇಷ ಸ್ಪರ್ಧೆ ನಿಗದಿಯಾಗಿದ್ದರೂ ಆ ಸಮಯಕ್ಕೆ ಯು.ಟಿ. ಖಾದರ್ ಕ್ಷೇತ್ರದಲ್ಲೇ ಬಿಝಿಯಾಗಿದ್ದರು. ಸಂಘಟಕರ ಒತ್ತಾಯದ ಮೇರೆಗೆ ಉಡುಪಿ ಹುಲಿವೇಷ ಸ್ಪರ್ಧೆಗೆ ರಾತ್ರಿ ಭೇಟಿಯಿತ್ತರು. ಹಿಂತಿರುಗುವಾಗ ಶ್ರೀಕೃಷ್ಣ ಮಠ ಭೇಟಿಯ ಕಲ್ಪನೆಯೂ ಇರಲಿಲ್ಲ. ಅದೂ ಕೂಡಾ ಶ್ರೀಕೃಷ್ಣ ಜನಿಸಿದ ಅದೇ ಮಧ್ಯರಾತ್ರಿ ಸಮಯದಲ್ಲಿ ಮಠದೊಳಗೆ ಯು.ಟಿ.ಖಾದರ್ ಪ್ರತ್ಯಕ್ಷವಾದದ್ದು ದೇವರ ವಿಧಿಯಾಗಿರಬಹುದು ಎಂದು ಅಲ್ಲಿಗೆ ಬಂದಿರುವ ಬೇರೆ ಬೇರೆ ಜಿಲ್ಲೆಯ ಭಕ್ತಾದಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ಪೀಕರ್ ಅವರೊಂದಿಗೆ ಕೌನ್ಸಿಲರ್ ಭಾಸ್ಕರ ರಾವ್ ಕಿದಿಯೂರ್, ರಮೇಶ್ ಕಾಂಚನ್, ಮುನಿಯಾಲ ಉದಯಕುಮಾರ್ ಶೆಟ್ಟಿ, ಮುಸ್ತಫ ಹರೇಕಳ, ಬದ್ರುದ್ದೀನ್ ಜೊತೆಗಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಎಳನೀರು ಕುಡಿಯುದರಿಂದ ಮನುಷ್ಯನ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಮತ್ತು ದುಷ್ಪರಿಣಾಮಗಳು

Next Post

ಕೊಂಕಣಿಯ ಬಹು ನಿರೀಕ್ಷಿತ ಚಲನಚಿತ್ರ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ

Related Posts

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ
ಕರಾವಳಿ

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

April 3, 2026
18
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ
ಕರಾವಳಿ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
25
Next Post
ಕೊಂಕಣಿಯ ಬಹು ನಿರೀಕ್ಷಿತ ಚಲನಚಿತ್ರ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ

ಕೊಂಕಣಿಯ ಬಹು ನಿರೀಕ್ಷಿತ ಚಲನಚಿತ್ರ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ

Discussion about this post

Recent News

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

April 3, 2026
18
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

April 3, 2026
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d