ಮಂಗಳೂರು: ಅಪ್ರಾಪ್ತೆ ಅತ್ಯಾಚಾರಗೈದು, ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆಯೊಡ್ಡಿದ್ದ, ಆರೋಪಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್‌ಟಿಎಸ್‌ಸಿ – 2 ನ್ಯಾಯಾಲಯ 15 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ತೋಡಾರು ಗ್ರಾಮ ನಿವಾಸಿ ಸೀತಾರಾಮ ಶಿಕ್ಷೆಗೊಳಗಾದ ಆರೋಪಿ. ಈತನ ಮೇಲಿರುವ ಆರೋಪ ಸಾಬೀತಾಗಿರುವ ಹಿನ್ನೆಲೆ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿದೆ. ಸೀತಾರಾಮ ತನ್ನ ಸಂಬಂಧಿಯಾಗಿರುವ ಬಾಲಕಿಯನ್ನು 2019ರ ಜನವರಿ 8ರಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಅಲ್ಲದೆ ಕೃತ್ಯದ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡುವುದಾಗಿ ಬೆದರಿಕೆಯನ್ನೊಡ್ಡಿದ್ದಾನೆ. ಈ ವಿಚಾರವನ್ನು ಸಂತ್ರಸ್ತ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ. ಆ ಬಳಿಕ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಜ್ಪೆ ಠಾಣಾ ನಿರೀಕ್ಷಕ ಕೆ.ಆರ್.ನಾಯಕ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-2 ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಅ. 3ರಂದು ಆರೋಪಿ ತೋಡಾರ್ ಗ್ರಾಮದ ಸೀತಾರಾಮ (26)ನಿಗೆ 15 ವರ್ಷಗಳ ಜೈಲು ಮತ್ತು 50 ಸಾವಿರ ರೂಪಾಯಿ ದಂಡವನ್ನು ವಿಧಿಸಿ, 2ನೇ ಆರೋಪಿ ನಾರಾಯಣನನ್ನು ಖುಲಾಸೆಗೊಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post