ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ಭಾರಿ ರಾಜಕೀಯ ಹೈಡ್ರಾಮಾ ನಡೆಯಿತು. ಇಂಡಿಯಾ ಮೈತ್ರಿಕೂಟದ ನಾಯಕರು ಕೇಂದ್ರ ಚುನಾವಣಾ ಆಯೋಗದ (ಇಸಿಐ) ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಸಿ ಪ್ರತಿಭಟನೆಯ ವೇಳೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬ್ಯಾರಿಕೇಡ್ ಹತ್ತಿ ಚುನಾವಣಾ ಆಯೋಗದ ಕಚೇರಿಯನ್ನು ನುಗ್ಗಲು ಯತ್ನಿಸಿದರು.


ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ನೂರಾರು ಸಂಸದರು ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯವರೆಗೆ ಮೆರವಣಿಗೆ ಆರಂಭಿಸಿದರು.

ಬ್ಯಾರಿಕೇಡ್ ಹತ್ತಿದ ರಾಹುಲ್ ಗಾಂಧಿ: ಮಂಗಳವಾರ ಬೆಳಗ್ಗೆ ಪ್ರತಿಭಟನೆ ಆರಂಭವಾದ ಬಳಿಕ ರಾಹುಲ್ ಗಾಂಧಿ ಮತ್ತು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಪೊಲೀಸ್ ಬ್ಯಾರಿಕೇಡ್‌ಗಳ ಮೇಲೆ ಹತ್ತಿ ನಿಂತಿರುವುದು ಕಂಡುಬಂದಿತು. ನಂತರ ರಾಹುಲ್ ಬ್ಯಾರಿಕೇಡ್ ಮೇಲೆ ನಿಂತು ತ್ರಿವರ್ಣ ಧ್ವಜವನ್ನು ಬೀಸಿದರೆ, ಇತರ ಸಂಸದರು ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮತದಾರರಾಗಿ ನೋಂದಾಣಿಯಿಸಿಕೊಳ್ಳಲು ಇರುವ ಶಾಸನಬದ್ಧ ಅರ್ಜಿಯಾದ ಫಾರ್ಮ್ 6 ನಲ್ಲಿ ಮಾಡಲಾದ ಬದಲಾವಣೆ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ನೀಡಿರುವ ಅವಲೋಕನಗಳ ಬಳಿಕ ವಿರೋಧ ಪಕ್ಷಗಳ ಸಂಸದರು ಸಿಇಸಿ ರಾಜೀನಾಮೆಗೆ ಒತ್ತಾಯ ತೀವ್ರಗೊಳಿಸಿದರು.
Discover more from Coastal Times Kannada
Subscribe to get the latest posts sent to your email.







Discussion about this post