ಪುತ್ತೂರು, ನ.6 : ಜೊತೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಅನಾರೋಗ್ಯ ಪೀಡಿತನಾದ ಕಾರಣ ಆತನನ್ನು ನೋಡಲು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರರಾದ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ.
ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆತನ ಮನೆಗೆ ಗುರುವಾರ ನ.6 ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ವಿಧ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ ಬಳಿಕ ವಿಭಿನ್ನ ಕೋಮುಗಳ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿದ್ಯಾರ್ಥಿಗೆ ಹಲ್ಲೆ ನಡೆಸಿರುತ್ತಾರೆ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.
Discover more from Coastal Times Kannada
Subscribe to get the latest posts sent to your email.







Discussion about this post