ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಯುವತಿಯೊಬ್ಬರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.ಅಲ್ಲದೇ,ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ . ಪವನ್ ಕುಮಾರ್ (21) ಬಂಧಿತ. ಈತ ಆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ.
ಆಸ್ಪತ್ರೆಗೆ ತಪಾಸಣೆಗೆ ಬಂದ ಮಹಿಳೆಯರು ಸ್ಕ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಿಸಲು ಕೋಣೆಯೊಂದರಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಯುವತಿಯೊಬ್ಬರು ಬಟ್ಟೆ ಬದಲಾಯಿಸುವುದಕ್ಕೆ ಮುನ್ನ ಆಸುಪಾಸಿನ ಸ್ಥಳಗಳನ್ನು ಪರಿಶೀಲಿಸಿದ್ದರು. ಈ ವೇಳೆ ಗುಪ್ತ ಸ್ಥಳದಲ್ಲಿ ಮೊಬೈಲ್ ಇಟ್ಟಿದ್ದು ಪತ್ತೆಯಾಗಿತ್ತು. ಈ ವಿಚಾರವನ್ನು ಯುವತಿಯು ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಪವನ್ ಈ ಕೃತ್ಯ ನಡೆಸಿದ್ದು ಗೊತ್ತಾಗಿದೆ. ಬಳಿಕ ಆಸ್ಪತ್ರೆಯವರೇ ಆತನ ವಿರುದ್ಧ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು ಬಂಧಿತ ಪವನ್ ಮೂಲತ: ಕಲಬುರಗಿ ನಿವಾಸಿಯಾಗಿದ್ದು ಪ್ರಸ್ತುತ ವಿದ್ಯಾಭ್ಯಾಸ ನಿಮಿತ್ತ ಬಜಪೆಯಲ್ಲಿ ವಾಸವಿದ್ದ. ಆತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Discover more from Coastal Times Kannada
Subscribe to get the latest posts sent to your email.







Discussion about this post