ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳೆಯುವ ಕುಚಲಕ್ಕಿಯನ್ನು ಪಡಿತರ ಕೇಂದ್ರಗಳಲ್ಲಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
‘ಪಡಿತರದಲ್ಲಿ ವಿತರಿಸಲು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳೆದ ಕುಚಲಕ್ಕಿ ನೀಡಲು ಒಪ್ಪಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ ನೀಡುವ ಜೊತೆಗೆ ಫಲಾನುಭವಿಗಳಿಗೆ ಅವರ ಆಯ್ಕೆಯ ಆಹಾರ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ’ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.