• About us
  • Contact us
  • Disclaimer
Wednesday, April 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜ.11 ರಂದು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮ, ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ

Coastal Times by Coastal Times
January 8, 2026
in ಕರಾವಳಿ
ಜ.11 ರಂದು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮ, ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ
24
VIEWS
WhatsappTelegramShare on FacebookShare on Twitter

ಮಂಗಳೂರು, ಜ.8 : ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮವನ್ನು ಕಾಶೀ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದರ ಪ್ರಯುಕ್ತ ಜ.11 ರಂದು ಸಂಜೆ ಕಾಶೀಮಠ ಕೊಂಚಾಡಿಯಲ್ಲಿರುವ ಶಾಖಾಮಠದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ನಡೆಯಲಿದೆ.

ಈ ಬಗ್ಗೆ  ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊತ್ತೇಸರ ಸಿಎ ಜಗನ್ನಾಥ್‌ ಕಾಮತ್‌ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಮಂಗಳೋತ್ಸವದ ಪೂರ್ವಭಾವಿಯಾಗಿ ಜನವರಿ 5 ರಂದು ಕರ್ನಾಟಕ, ಕೇರಳದಿಂದ ಹೊರಕಾಣಿಕಾ ಸೇವಾ ಸಮರ್ಪಣೆ ನಭೂತೋ ಎಂಬಂತೆ ನಡೆದಿವೆ. ದೇಶದ ವಿವಿದೆಡೆಗಳಿಂದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಮಂಗಳೂರಿಗೆ ಆಗಮಿಸುತ್ತಿದ್ದು, ಅದರಲ್ಲಿ ಕೂಡ ಆಯಾ ಊರಿನ ನಾಗರಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.

ಜನವರಿ 11 ರಂದು ಭಾನುವಾರ ಜನ್ಮಶತಾಬ್ಬಿಯ ಮಂಗಳೋತ್ಸವ ನಡೆಯಲಿದ್ದು, ಮಧ್ಯಾಹ್ನ 3.30 ಕ್ಕೆ ಶ್ರೀ ಕಾಶೀಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಊರ, ಪರವೂರ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಅಲ್ಲಿಂದ ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ಆರಂಭವಾಗಲಿದೆ. ಕೊಂಚಾಡಿಯಿಂದ ಮೇರಿಹಿಲ್, ಯೆಯ್ಯಾಡಿ, ಕೆಪಿಟಿ, ಬಿಜ್ಜೆ, ಕೆಎಸ್ ಆರ್ ಟಿಸಿ ಲಾಲ್ ಬಾಗ್, ಎಂ.ಜಿ.ರಸ್ತೆ, ಪಿ.ಬಿ.ಎಸ್ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ ಮೂಲಕ ಕೆನರಾ ಹೈಸ್ಕೂಲ್ ನಲ್ಲಿ ಸೇರಲಿದೆ. ಅಲ್ಲಿ ಹತ್ತು ಸಾವಿರ ಮಂದಿಗೆ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ದಾರಿಯುದ್ದಕ್ಕೂ ಯೆಯ್ಯಾಡಿ, ಬಿಚ್ಚಿ, ಲಾಲ್ ಭಾಗ್ ನ ನಿರ್ದಿಷ್ಟ ಜಾಗಗಳಲ್ಲಿ ಪಾನೀಯದ ವ್ಯವಸ್ಥೆ ಮಾಡಲಾಗಿದೆ.

ಈ ಪಾದಯಾತ್ರೆಯಲ್ಲಿ ವಿವಿಧ ಊರ ಭಜನಾ ಮಂಡಳಿಗಳು ದೇವರ, ಸ್ವಾಮೀಜಿಯವರ ಭಜನೆಯನ್ನು ಹಾಡುತ್ತಾ, ಪಾದಯಾತ್ರೆಯಲ್ಲಿ ಸಾಗಲಿವೆ. ಬೆಂಡೆ, ಬ್ಯಾಂಡ್ ಸೆಟ್, ದೇವರ, ಮಹಾಪುರುಷರ ವೇಷಭೂಷಣಗಳನ್ನು ಧರಿಸಿದ ಮಕ್ಕಳ ಟ್ಯಾಬ್ಲೊಗಳು, ವೇದಘೋಷ, ವಾದ್ಯಗಳೊಂದಿಗೆ ಸ್ವಾಮೀಜಿಯವರ ಭಾವಚಿತ್ರ ಇರುವ ಟ್ಯಾಬ್ಲೊ, ಸ್ವಾಮೀಜಿಯವರ ಪಾದುಕೆ ಇರುವ ಟ್ಯಾಟ್ಟೋ ಸಹಿತ ವಿವಿಧ ಕಲಾಪ್ರಕಾರಗಳು ಪಾದಯಾತ್ರೆಯ ಶೋಭೆಯನ್ನು ಹೆಚ್ಚಿಸಲಿವೆ. ಕೆನರಾ ಹೈಸ್ಕೂಲ್ ನಲ್ಲಿ ಭಕ್ತರು ಆಹಾರ ಸೇವಿಸಿದ ಬಳಿಕ ಪಾದಯಾತ್ರೆ ಡೊಂಗರಕೇರಿ, ನ್ಯೂಟಿತ್ರಾ, ಶ್ರೀನಿವಾಸ ಥಿಯೇಟರ್‌, ಸ್ವದೇಶಿ ಸ್ಟೋರ್ ತಲುಪಲಿದೆ. ಈ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿ ಇರಲಿದೆ. ಸ್ವದೇಶಿ ಸ್ಟೋರ್ ಬಳಿಯಿಂದ ಸ್ವರ್ಣ ಲಾಲಕಿಯಲ್ಲಿ ದೇವರೊಂದಿಗೆ ಪಾದಯಾತ್ರೆ ಶ್ರೀ ವೆಂಕಟರಮಣ ದೇವಸ್ಥಾನ ತಲುಪಲಿದೆ. ಅಲ್ಲಿ ಮಂಗಳೋತ್ಸವದ ಸಭಾ ಕಾರ್ಯಕ್ರಮ ನಡೆಯಲಿದೆ.

ಮಂಗಳೋತ್ಸವ ಸಭಾ ಕಾರ್ಯಕ್ರಮ: ಜನವರಿ 11 ರಂದು ರಾತ್ರಿ 8.30 ರಿಂದ ಮಂಗಳೋತ್ಸವದ ಸಭಾ ಕಾರ್ಯಕ್ರಮದಲ್ಲಿ ಕಾಶೀಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಹಿರಿಯ ಯತಿವರೇಣ್ಯರೂ, ಮಹಾತಪಸ್ವಿಗಳಾದ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುಣಗಾನದೊಂದಿಗೆ ಆರ್ಶೀವಚನ ನೀಡಲಿದ್ದಾರೆ, ಈ ಸಮಯದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಪಾರ್ಕಿಂಗ್ ವ್ಯವಸ್ಥೆ ಕೊಂಚಾಡಿಯಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗವಹಿಸುವವರು ತಮ್ಮ ವಾಹನಗಳನ್ನು (ಬಸ್ಸು, ಕಾರು, ಜೀಪು, ವ್ಯಾನ್, ದ್ವಿಚಕ್ರವಾಹನ) ಕೊಂಚಾಡಿ ಕಾಶೀಮಠದ ಬಳಿಯಿರುವ ಕೆನರಾ ವಿಕಾಸ್ ಕಾಲೇಜಿನ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು. ಇನ್ನು ಕೊಂಡಾಡಿ ಕಾಶೀಮಠದ ಬಳಿ ಜನರನ್ನು ಇಳಿಸಿ, ಹಂಪನಕಟ್ಟೆಯ ಬಳಿಯಿಂದ ಮೂಲ್ಕಿ ಸುಂದರರಾಮ್ ಶೆಟ್ಟರಸ್ತೆಯ ಮೂಲಕ ಎಲೋಶಿಯಸ್ ಕಾಲೇಜಿನ ಗೇಟ್ ನಂಬರ್ 1 ಒಳಗೆ ಹಾಗೂ ಗೇಟ್ ಸಿ ಒಳಗೆ ಪಾರ್ಕ್ ಮಾಡಬಹುದು. ಇನ್ನು ಕಾರುಗಳನ್ನು ಕೊಡಿಯಾಲ್ ಬೈಲ್ ಎಸ್ ಡಿಸಿಸಿ ಬ್ಯಾಂಕಿನ ಪಕ್ಕದಲ್ಲಿರುವ ಎಲೋಶಿಯಸ್ ಕಾಲೇಜಿನ ಗೇಟ್ ಮೂಲಕ ಹೋಗಿ ಲೊಯಲಾ ಸಭಾಂಗಣದ ಮೈದಾನದಲ್ಲಿ ಪಾರ್ಕಿಂಗ್ ಮಾಡಬಹುದು. ಇನ್ನು ಕೊಡಿಯಾಲ್ ಬೈಲ್ ನಲ್ಲಿರುವ ಬೆಸೆಂಟ್ ಕಾಲೇಜಿನಲ್ಲಿಯೂ ಬಸ್, ಕಾರುಗಳನ್ನು ಪಾರ್ಕಿಂಗ್ ಮಾಡಬಹುದು. ಕೆನರಾ ವಿಕಾಸ್ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ಮಾಡಿದ ವಾಹನಗಳನ್ನು ರಾತ್ರಿ 10 ಗಂಟೆಯ ಬಳಿಕ ಸಿಟಿಪಾಯಿಂಟ್, ಪಾಸ್ ಪೋರ್ಟ್ ಆಫೀಸಿನ ಬಳಿ ತಂದು ನಿಲ್ಲಿಸಬೇಕು. ಎಲೋಶಿಯಸ್, ಬೆಸೆಂಟ್ ನಲ್ಲಿ ಪಾರ್ಕಿಂಗ್ ಮಾಡಿದ ವಾಹನಗಳು ಅಲ್ಲಿಯೇ ಇದ್ದು ಭಕ್ತಾದಿಗಳು ಅಲ್ಲಿಗೆ ತೆರಳಿ ತಾವು ಆಗಮಿಸಿದ ವಾಹನಗಳ ಮೂಲಕ ತೆರಳಬೇಕು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಈ ವ್ಯವಸ್ಥೆಯನ್ನು ಪಾಲಿಸಿ ಸಹಕರಿಸಬೇಕಾಗಿ ವಿನಂತಿ,

ರಾತ್ರಿ ಭೋಜನ ಪ್ರಸಾದದ ವ್ಯವಸ್ಥೆ: ಊರ, ಪರವೂರ ಭಕ್ತರಿಗೆ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ರಾತ್ರಿ 8.30 ರ ಬಳಿಕ ಮಹಾಮಾಯಾ ದೇವಸ್ಥಾನದ ಬಳಿ, ಉಮಾಮಹೇಶ್ವರ ದೇವಸ್ಥಾನದ ಬಳಿ, ಭವಂತಿ ಸ್ಟ್ರೀಟ್ ನಲ್ಲಿರುವ ಹಿಂದಿನ ನ್ಯೂ ಮಂಗಳೂರು ಹೆಲ್ತ್ ಕೇರ್ ಸೆಂಟರ್ ಜಾಗಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. 

ಪತ್ರಿಕಾ ಗೋಷ್ಟಿಯಲ್ಲಿ ಶಾಸಕ ಡಿ ವೇದವ್ಯಾಸ ಕಾಮತ್, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊತ್ತೇಸರ ಅಡಿಗೆ ಬಾಲಕೃಷ್ಣ ಶೆಣೈ, ಮೊತ್ತೇಸರ ಸಿಎ ಜಗನ್ನಾಥ್‌ ಕಾಮತ್‌, ಆಲ್ ಟೆಂಪಲ್ ಅಸೋಸಿಯೇಶನ್ ಅಧ್ಯಕ್ಷ ಅತುಲ್ ಕುಡ್ವ, ಪ್ರಮುಖರಾದ ಕೋಟೇಶ್ವರ ದಿನೇಶ್‌ ಕಾಮತ್‌, ವಾಸುದೇವ್‌ ಕಾಮತ್, ರಘುವೀರ್ ಭಂಡಾರಕಾರ್, ಟಿ. ಗಣಪತಿ ಪೈ ಹಾಗೂ ಮುಖಂಡರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ- “ದೈವಜ್ಞರ ಸಂಪ್ರದಾಯ, ಸಂಸ್ಕಾರ ಪುನರುತ್ಥಾನಗೊಳ್ಳಲಿ”- ದೈವಜ್ಞ ಶ್ರೀ ಶ್ರೀ.

Next Post

ಮಂಗಳೂರು: ಕಡಲೇಬೀಜ ಸಿಲುಕಿ ತೀವ್ರ ಉಸಿರಾಟದ ಸಮಸ್ಯೆಗೆ ಒಳಗಾದ 10 ತಿಂಗಳ ಮಗು- ಕೆಎಂಸಿ ವೈದ್ಯರಿಂದ ರಕ್ಷಣೆ

Related Posts

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು
ಕರಾವಳಿ

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಕರಾವಳಿ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
Next Post
ಮಂಗಳೂರು: ಕಡಲೇಬೀಜ ಸಿಲುಕಿ ತೀವ್ರ ಉಸಿರಾಟದ ಸಮಸ್ಯೆಗೆ ಒಳಗಾದ 10 ತಿಂಗಳ ಮಗು- ಕೆಎಂಸಿ ವೈದ್ಯರಿಂದ ರಕ್ಷಣೆ

ಮಂಗಳೂರು: ಕಡಲೇಬೀಜ ಸಿಲುಕಿ ತೀವ್ರ ಉಸಿರಾಟದ ಸಮಸ್ಯೆಗೆ ಒಳಗಾದ 10 ತಿಂಗಳ ಮಗು- ಕೆಎಂಸಿ ವೈದ್ಯರಿಂದ ರಕ್ಷಣೆ

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d