ಮಂಗಳೂರು, ಫೆ.08: ಹಾಸ್ಟೆಲ್ ಊಟ ಸೇವಿಸಿ ಸುಮಾರು 30ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಮಂಗಳೂರು ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಊಟದಲ್ಲಿ ಹುಳ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಶಂಕೆ ವ್ಯಕ್ತವಾಗಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೊಟ್ಟೆ ನೋವಿನಿಂದ ನರಳಿದ ಕಾರಣ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಊಟದಲ್ಲಿ ಹುಳ ಬಿದ್ದು ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಕಾಲೇಜು ಹಾಸ್ಟೆಲ್ ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಾದವರು ಕೇರಳದ ವಿದ್ಯಾರ್ಥಿಗಳಾಗಿದ್ದು ಬುಧವಾರ ಸಂಜೆ ಹೊತ್ತಿಗೆ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ತಿಳಿದುಬಂದಿದೆ.
Discussion about this post