ದುಬೈ: ಪ್ರಖ್ಯಾತ ವ್ಲಾಗರ್ ಮತ್ತು ಮಲಯಾಳಂ ಆಲ್ಬಂ ಸ್ಟಾರ್ ರಿಫಾ ಮೆಹ್ನು (21) ಮಾರ್ಚ್ 1ರ ರಾತ್ರಿ ದುಬೈನ ತಮ್ಮ ಫ್ಲ್ಯಾಟ್ನಲ್ಲಿ ರಿಫಾ ಶವವಾಗಿ ಪತ್ತೆಯಾಗಿದೆ.
ಅಂದಹಾಗೆ ರಿಫಾ, ಕೇರಳದ ಕೊಯಿಕ್ಕೋಡ್ ನಗರದ ಬಲುಸ್ಸೆರಿ ಮೂಲದ ನಿವಾಸಿ. ದುಬೈನ ಜಫ್ಫಿಲಿಯಾದಲ್ಲಿರುವ ಫ್ಲ್ಯಾಟ್ನಲ್ಲಿ ಮಾರ್ಚ್ 1ರಂದು ಶವವಾಗಿ ಪತ್ತೆಯಾಗಿದ್ದರು. ತಮ್ಮ ಪತಿ ಮೆಹ್ನೋವ್ ಮತ್ತು ಮಗಳ ಜತೆ ದುಬೈನಲ್ಲಿ ನೆಲೆಸಿದ್ದರು. ಸಾವಿಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಆದರೆ, ಪತಿಯ ಮನೆಯವರು ಆತ್ಮಹತ್ಯೆ ಎಂದರೆ, ರಿಫಾ ಪಾಲಕರು ಮತ್ತು ಆಪ್ತರು ಸಂಶಯ ವ್ಯಕ್ತಪಡಿಸಿದ್ದಾರೆ.
ರಿಫಾ ಅವರು ಆಹಾರ ಮತ್ತು ಫ್ಯಾಶನ್ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದರು. ಕೇರಳದಲ್ಲಿ ತುಂಬಾ ಪ್ರಸಿದ್ಧಿಯನ್ನು ಪಡೆದಿದ್ದರು. ಸದಾ ಸಾಮಾಜಿಕ ಜಾಲತಾಣದಲ್ಲಿ ರಿಫಾ ಬಿಜಿಯಾಗಿರುತ್ತಿದ್ದರು. ಸಾವಿಗೂ ಕೆಲವು ಕ್ಷಣಗಳ ಹಿಂದೆಯೂ ಆಕೆ ಜಾಲತಾಣದಲ್ಲಿ ಸಕ್ರೀಯರಾಗಿದ್ದರು. ರಿಫಾ ಇನ್ಸ್ಟಾಗ್ರಾಂ ಪೇಜ್ನಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ.
ಯುಎಇಯ ಜನಪ್ರಿಯ ಹೋಟೆಲ್‌ನಲ್ಲಿ ರಿಫಾ ಮತ್ತು ಅವರ ಪತಿ ಆಹಾರವನ್ನು ತಿನ್ನುತ್ತಿರುವ ಅವರ ಕೊನೆಯ ವಿಡಿಯೋಗೆ ಸಿಕ್ಕಾಪಟ್ಟೆ ಕಾಮೆಂಟ್‌ಗಳು ಹರಿದು ಬರುತ್ತಿವೆ. ರಿಫಾ ಕಳೆದುಕೊಂಡ ಕುಟುಂಬ ದುಃಖ ಸಾಗರದಲ್ಲಿ ಮುಳುಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯ ನಂತರ ಸಾವಿಗೆ ಕಾರಣ ಏನೆಂದು ತಿಳಿದುಬರಲಿದೆ.
Discover more from Coastal Times Kannada
Subscribe to get the latest posts sent to your email.
Discussion about this post