ಉಳ್ಳಾಲ, ಮಾ.8: ತೊಕ್ಕೊಟ್ಟು ಬಳಿಯ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆಮರೆಸಿಕೊಂಡಿದ್ದಾನೆ.
ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಬಂಧಿತ ಆರೋಪಿ. ರುಕಿಯಾ ಗಂಡನನ್ನು ಕಳಕೊಂಡ ಮಹಿಳೆಯಾಗಿದ್ದು ವಿಜೇತ ನಗರದ ಬಾಡಿಗೆ ಮನೆಯಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್.ಜಿ.ಎಸ್, ಪೊಲೀಸ್ ಉಪ- ನಿರೀಕ್ಷಕರಾದ ಮಂಜುಳಾ ಎಲ್. ಹಾಗೂ ಸಿಬಂದಿಗಳು ದಾಳಿ ನಡೆಸಿ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಲತೀಫ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆತನ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಧಿತ ರುಕಿಯಾ ಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್‌ಗಳು, 5,000 ರೂ. ನಗದು ಸೇರಿ 1,76,580 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪ ವಿಭಾಗ ರವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post