ನವದೆಹಲಿ, ಮಾ.8: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ ಅವರು ರಾಜ್ಯಸಭೆಗೆ ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದರು.
Discussion about this post