• About us
  • Contact us
  • Disclaimer
Tuesday, November 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

Coastal Times by Coastal Times
March 8, 2026
in ಕರಾವಳಿ
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
14
VIEWS
WhatsappTelegramShare on FacebookShare on Twitter

ಮಂಗಳೂರು, ಮಾರ್ಚ್ 07: ಗಲ್ಫ್ ಯುದ್ಧದ ಕಾರಣ ಕಚ್ಚಾ ತೈಲದ ಕೊರತೆಯಿಂದ ಎಂಆರ್ ಪಿಎಲ್ ಘಟಕದ ಕೆಲವು ರಿಫೈನರಿ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್  (ಎಂಆರ್‌ಪಿಎಲ್) ಸಂಪೂರ್ಣ ತಳ್ಳಿಹಾಕಿದ್ದು ರಿಫೈನರಿಯ ಎಲ್ಲ ಕಾರ್ಯಾಚರಣೆಗಳು ಸಹಜ ರೀತಿಯಲ್ಲೇ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದೆ.

ಸೋಶಿಯಲ್ ಮೀಡಿಯಾ ವದಂತಿ ಸುಳ್ಳು ಎಂದ ರಿಫೈನರಿ : ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ OilPrice.com ಪ್ರಕಟಿಸಿದ ಪೋಸ್ಟ್‌ನಲ್ಲಿ ಪರ್ಷಿಯನ್ ಗಲ್ಪ್ ಪ್ರದೇಶದ ಉದ್ವಿಗ್ನತೆಯಿಂದ ಕಚ್ಚಾ ತೈಲ ಸಾಗಣೆ ವಿಳಂಬವಾಗಿದ್ದು, ಮಂಗಳೂರಿನ 3 ಲಕ್ಷ ಬ್ಯಾರೆಲ್ ಸಾಮರ್ಥ್ಯದ ರಿಫೈನರಿಯ ಕೆಲವು ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಈ ಮಾಹಿತಿ ತಪ್ಪಾಗಿದೆ ಎಂದು MRPL ಸ್ಪಷ್ಟಪಡಿಸಿದೆ. ಈ ರೀತಿಯ ವದಂತಿಗಳು ವಾಸ್ತವಕ್ಕೆ ದೂರವಾಗಿದ್ದು, MRPL ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ರಿಫೈನರಿ ಕಾರ್ಯಾಚರಣೆ ಮುಂದುವರಿಸಲು ಬೇಕಾದಷ್ಟು ಕಚ್ಚಾ ತೈಲವನ್ನು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ರಿಫೈನರಿಯಲ್ಲಿ ಯಾವುದೇ ಘಟಕವನ್ನು ಸ್ಥಗಿತಗೊಳಿಸಲಾಗಿಲ್ಲ ಹಾಗೂ ಸಾಮಾನ್ಯ ಸಾಮರ್ಥ್ಯದಲ್ಲೇ ಕಾರ್ಯನಿರ್ವಹಣೆ ಮುಂದುವರಿದಿದೆ ಎಂದು MRPL ಹೇಳಿದೆ. ತಪ್ಪು ಮಾಹಿತಿಗಳು ಹರಡದಂತೆ ಸಾರ್ವಜನಿಕರು ಈ ಸ್ಪಷ್ಟೀಕರಣವನ್ನು ಗಮನಿಸಬೇಕು ಎಂದು ಕಂಪನಿ ಮನವಿ ಮಾಡಿದೆ. ಇದರ ನಡುವೆ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕೂಡ ತಳ್ಳಿ ಹಾಕಿದೆ. ದೇಶದಲ್ಲಿ ಸಾಕಷ್ಟು ಇಂಧನ ಸಂಗ್ರಹವಿದ್ದು, ಪೂರೈಕೆ ಮತ್ತು ವಿತರಣೆ ವ್ಯವಸ್ಥೆ ಸಾಮಾನ್ಯವಾಗಿ ನಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ.
ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ಡೀಪ್ ಸಿಂಗ್ ಪುರಿ ಕೂಡ ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳ ನಡುವೆಯೂ ಭಾರತದಲ್ಲಿ ಇಂಧನ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Next Post

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

Related Posts

ಮಂಗಳೂರು ನೈಟ್ ಲೈಫ್‌ಗೆ ಗ್ರೀನ್ ಸಿಗ್ನಲ್: 11.45ರ ವರೆಗೂ ಹೊಟೇಲ್, ರೆಸ್ಟೋರೆಂಟ್ ನಡೆಸಲು ಅವಕಾಶ, ಕಮಿಷನರ್ ಸುಧೀರ್ ರೆಡ್ಡಿ ಆದೇಶ
ಕರಾವಳಿ

ಮಂಗಳೂರು ನೈಟ್ ಲೈಫ್‌ಗೆ ಗ್ರೀನ್ ಸಿಗ್ನಲ್: 11.45ರ ವರೆಗೂ ಹೊಟೇಲ್, ರೆಸ್ಟೋರೆಂಟ್ ನಡೆಸಲು ಅವಕಾಶ, ಕಮಿಷನರ್ ಸುಧೀರ್ ರೆಡ್ಡಿ ಆದೇಶ

November 24, 2026
30
ಮಂಗಳೂರು ಏರ್ಪೋರ್ಟ್ ನಲ್ಲಿ  ಪ್ರವೇಶ ಶುಲ್ಕ, ಪಾರ್ಕಿಂಗ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ, ನ.24ರಂದು ಉಡುಪಿ, ದ.ಕ.ದಲ್ಲಿ ಟ್ಯಾಕ್ಸಿ ನಿಲ್ಲಿಸಿ ಮುಷ್ಕರಕ್ಕೆ ಕರೆ
ಕರಾವಳಿ

ಮಂಗಳೂರು ಏರ್ಪೋರ್ಟ್ ನಲ್ಲಿ ಪ್ರವೇಶ ಶುಲ್ಕ, ಪಾರ್ಕಿಂಗ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ, ನ.24ರಂದು ಉಡುಪಿ, ದ.ಕ.ದಲ್ಲಿ ಟ್ಯಾಕ್ಸಿ ನಿಲ್ಲಿಸಿ ಮುಷ್ಕರಕ್ಕೆ ಕರೆ

November 22, 2026
34
Next Post
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

Discussion about this post

Recent News

ಮಂಗಳೂರು ನೈಟ್ ಲೈಫ್‌ಗೆ ಗ್ರೀನ್ ಸಿಗ್ನಲ್: 11.45ರ ವರೆಗೂ ಹೊಟೇಲ್, ರೆಸ್ಟೋರೆಂಟ್ ನಡೆಸಲು ಅವಕಾಶ, ಕಮಿಷನರ್ ಸುಧೀರ್ ರೆಡ್ಡಿ ಆದೇಶ

ಮಂಗಳೂರು ನೈಟ್ ಲೈಫ್‌ಗೆ ಗ್ರೀನ್ ಸಿಗ್ನಲ್: 11.45ರ ವರೆಗೂ ಹೊಟೇಲ್, ರೆಸ್ಟೋರೆಂಟ್ ನಡೆಸಲು ಅವಕಾಶ, ಕಮಿಷನರ್ ಸುಧೀರ್ ರೆಡ್ಡಿ ಆದೇಶ

November 24, 2026
30
ಕಾವೂರು: ಕೆಲಸ ಮಾಡಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕನನ್ನು ಕೊಂದವನಿಗೆ ಜೀವಾವಧಿ ಶಿಕ್ಷೆ

ಕಾವೂರು: ಕೆಲಸ ಮಾಡಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕನನ್ನು ಕೊಂದವನಿಗೆ ಜೀವಾವಧಿ ಶಿಕ್ಷೆ

November 22, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ನೈಟ್ ಲೈಫ್‌ಗೆ ಗ್ರೀನ್ ಸಿಗ್ನಲ್: 11.45ರ ವರೆಗೂ ಹೊಟೇಲ್, ರೆಸ್ಟೋರೆಂಟ್ ನಡೆಸಲು ಅವಕಾಶ, ಕಮಿಷನರ್ ಸುಧೀರ್ ರೆಡ್ಡಿ ಆದೇಶ

ಮಂಗಳೂರು ನೈಟ್ ಲೈಫ್‌ಗೆ ಗ್ರೀನ್ ಸಿಗ್ನಲ್: 11.45ರ ವರೆಗೂ ಹೊಟೇಲ್, ರೆಸ್ಟೋರೆಂಟ್ ನಡೆಸಲು ಅವಕಾಶ, ಕಮಿಷನರ್ ಸುಧೀರ್ ರೆಡ್ಡಿ ಆದೇಶ

November 24, 2026
ಕಾವೂರು: ಕೆಲಸ ಮಾಡಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕನನ್ನು ಕೊಂದವನಿಗೆ ಜೀವಾವಧಿ ಶಿಕ್ಷೆ

ಕಾವೂರು: ಕೆಲಸ ಮಾಡಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕನನ್ನು ಕೊಂದವನಿಗೆ ಜೀವಾವಧಿ ಶಿಕ್ಷೆ

November 22, 2026
ಬಂಟ್ವಾಳ ; ರಸ್ತೆ ಬದಿ ನಿಲ್ಲಿಸಿದ್ದ ಕಾರು, ಕ್ರೇನ್‌ಗೆ ಮತ್ತೊಂದು ಕಾರು ಡಿಕ್ಕಿ, ಮೆಕ್ಯಾನಿಕ್ ಸೇರಿ ಮೂವರು ಗಂಭೀರ ಗಾಯ

ಬಂಟ್ವಾಳ ; ರಸ್ತೆ ಬದಿ ನಿಲ್ಲಿಸಿದ್ದ ಕಾರು, ಕ್ರೇನ್‌ಗೆ ಮತ್ತೊಂದು ಕಾರು ಡಿಕ್ಕಿ, ಮೆಕ್ಯಾನಿಕ್ ಸೇರಿ ಮೂವರು ಗಂಭೀರ ಗಾಯ

November 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d