ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಎರಡನೇ ದಿನವಾದ ಗುರುವಾರ ಭಾರತವು, ಪಾಕಿಸ್ತಾನದ ಮತ್ತಷ್ಟು ಉಗ್ರ ನೆಲೆಗಳ ಮೇಲೆ ದಾಳಿ ಮಾಡಿದೆ. ಲಾಹೋರ್, ರಾವಲ್ಪಿಂಡಿಯ ಹಲವು ಪ್ರದೇಶಗಳ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ.
ಭಾರತೀಯ ಸೇನೆಯಿಂದ ಪಾಕಿಸ್ತಾನದ ಲಾಹೋರ್, ಕರಾಚಿ, ಸಿಯೋಲ್ ಕೋಟ್ ಮೇಲೆ ದಾಳಿ ನಡೆಸಲಾಗಿದೆ. ಭಾರತದ ಮೇಲೆ ಪಾಕ್ ದಾಳಿಯನ್ನು ವಿಫಲಗೊಳಿಸಿದ ಬಳಿಕ ಭಾರತೀಯ ಸೇನೆಯಿಂದ ದಾಳಿ ನಡೆಸಲಾಗಿದೆ. ಪಾಕಿಸ್ತಾನ ಭಾರತದ ಚಂಡೀಗಢ, ಆವಂತಿಪೊರ, ಜಲಂಧರ್, ಲೂಧಿಯಾನ, ಅಮೃತಸರ, ಪಠಾಣಕೋಟ್, ಕಪೂರ್ತಲಾ, ನಲ, ಫಲೋಡಿ, ಉತ್ತರಲೈ, ಭುಜ್, ಜಮ್ಮು, ಶ್ರೀನಗರ, ಆಧಂಪುರ, ಭಟಿಂಡಾ ಮೇಲೆ ದಾಳಿಗೆ ಯತ್ನಿಸಿತ್ತು. ನಿನ್ನೆ ರಾತ್ರಿ ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ದಾಳಿಗೆ ಮುಂದಾಗಿತ್ತು. ಪಾಕಿಸ್ತಾನ ಸೇನೆಯ ದಾಳಿಯನ್ನು ವಿಫಲಗೊಳಿಸಿರುವ ಭಾರತೀಯ ಸೇನೆ S-400 ಏರ್ಡಿಫೆನ್ಸ್ ಸಿಸ್ಟಮ್ ಮೂಲಕ ಪಾಕಿಸ್ತಾನದ ಚೀನಾ ನಿರ್ಮಿತ HQ-9 ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಧ್ವಂಸ ಮಾಡಿದೆ. ಪಾಕಿಸ್ತಾನದ ಕ್ಷಿಪಣಿಗಳ ಅವಶೇಷಗಳನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನದ HQ-9 ವಾಯು ರಕ್ಷಣಾ ವ್ಯವಸ್ಥೆಯನ್ನು ಭಾರತ ನಾಶಪಡಿಸಿದ್ದು ಮತ್ತು ಪಶ್ಚಿಮ ಭಾರತದ ಹಲವಾರು ಸೇನಾ ಪ್ರದೇಶಗಳ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಿದೆ.
ಪಾಕಿಸ್ತಾನದ ರಾಡಾರ್ ಧ್ವಂಸ: ಇದಕ್ಕೆ ಪ್ರತ್ಯುತ್ತರ ನೀಡಿರುವ ಭಾರತದ ವಾಯುಸೇನೆಯು ಇಂದು ಬೆಳಗ್ಗೆ ಲಾಹೋರ್ನ ವಾಯುನೆಯಲ್ಲಿರುವ ರಾಡಾರ್ ವ್ಯವಸ್ಥೆಯನ್ನು ನಾಶಪಡಿಸಿದೆ. ಜೊತೆಗೆ ಶೇಖ್ಪುರ, ಸಿಯಾಲ್ ಕೋಟ್, ಗುಜರನ್ ವಾಲಾ, ನರೊವಾಲಾ ಮತ್ತು ಚಕ್ವಾಲ್ ಮೇಲೂ ಡ್ರೋನ್ ದಾಳಿ ನಡೆಸಿದೆ. ಇಂದು 25 ಕ್ಷಿಪಣಿಗಳನ್ನು ಹಾರಿಸಲಾಗಿದ್ದು, ಇದರಲ್ಲಿ 7 ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಭಾರತದ ರಕ್ಷಣಾ ಸಚಿವಾಲಯವು ನೀಡಿದ ಹೇಳಿಕೆಯಂತೆ, ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಹಲವಾರು ಮಿಲಿಟರಿ ಪ್ರದೇಶಗಳ ಮೇಲೆ ಪಾಕಿಸ್ತಾನದ ಸೇನೆಯು ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕೆ ಪ್ರತ್ಯುತ್ತರವಾಗಿ ನಮ್ಮ ಸೇನೆಯು ದಾಳಿ ನಡೆಸಿ, ಲಾಹೋರ್‌ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ (ರಾಡಾರ್) ಯನ್ನು ಪುಡಿಗಟ್ಟಿದೆ ಎಂದು ತಿಳಿಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post