ಕೊಣಾಜೆ: : ಮುಡಿಪು ಕಾಯೆರ್ ಗೋಳಿ ಪ್ರದೇಶದಲ್ಲಿ 76 ಹರೆಯದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ಜು ಬೊಕ್ಕಪಟ್ಟಣ ನಿವಾಸಿಗಳಾದ ಬಾಲಸುಬ್ರಹ್ಮಣ್ಯಂ (49) ಹಾಗೂ ಶ್ಯಾಮ್ ಕುಮಾರ್ (33) ಎಂದು ಗುರುತಿಸಲಾಗಿದೆ. ಶ್ಯಾಮ್ ಕುಮಾರ್ ಆಟೋ ರಿಕ್ಷಾ ಮಾಲಿಕನಾಗಿದ್ದು, ಮಣ್ಣಗುಡ್ಡದಲ್ಲಿ ವಾಸವಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆ.3ರಂದು ಮಧ್ಯಾಹ್ನ ಸುಮಾರು 1.15ಕ್ಕೆ ಮುಡಿಪು ಕಾಯೆರ್ ಗೋಳಿಯ ಭವಾನಿ ಆಚಾರ್ಯ (76) ಅವರು ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಇಬ್ಬರು ಅಪರಿಚಿತರು ಮನೆ ಬಾಡಿಗೆ ಕುರಿತು ವಿಚಾರಿಸುವ ನೆಪದಲ್ಲಿ ಬಾಗಿಲು ತಟ್ಟಿದ್ದರು. ವೃದ್ಧೆ ಬಾಗಿಲು ತೆರೆದ ತಕ್ಷಣ ಆರೋಪಿಗಳು ಬಲವಂತವಾಗಿ ಮನೆಯೊಳಗೆ ನುಗ್ಗಿ ಅವರನ್ನು ಕೆಳಕ್ಕೆ ತಳ್ಳಿಹಾಕಿ ಹಲ್ಲೆ ನಡೆಸಿದ್ದಾರೆ. ಬಳಿಕ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಬಳೆಯನ್ನು ಕಿತ್ತು ಪರಾರಿಯಾಗಿದ್ದರು. ದರೋಡೆಗೈಯಲಾದ ಚಿನ್ನಾಭರಣಗಳ ಒಟ್ಟು ತೂಕ 24 ಗ್ರಾಂ ಆಗಿದ್ದು, ಅಂದಾಜು ಮೌಲ್ಯ ಸುಮಾರು 3 ಲಕ್ಷ ರೂ. ಎಂದು ತಿಳಿದುಬಂದಿದೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 88/2026ರಂತೆ ಪ್ರಕರಣ ದಾಖಲಾಗಿತ್ತು
ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ತನಿಖೆಯ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಆ.7ರಂದು ಮರೋಳಿ ಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ರಿಂದ ದರೋಡೆ ಮಾಡಲಾದ ಸಂಪೂರ್ಣ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಬೈಕ್‌ನನ್ನೂ ಸ್ವಾಧೀನಪಡಿಸಿಕೊಳ್ಳಲಾಗಿದೆ.
ತನಿಖೆಯ ವೇಳೆ ಮತ್ತೊಂದು ಕುತೂಹಲಕಾರಿ ಸಂಗತಿ ಬೆಳಕಿಗೆ ಬಂದಿದೆ. ಬಾಲ ಸುಬ್ರಮಣ್ಯ ಹಲಸು ಸೀಸನ್ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿರುವ ಹಲಸಿನ ಮರ ಇರುವ ಮನೆಗಳಿಗೆ ತೆರಳಿ ಹಲಸು ತೆಗೆಯುವ ಆಮಿಷ ನೀಡುತ್ತಿದ್ದ. ಭವಾನಿ ಅವರ ಮನೆಗೂ 20 ದಿನಗಳ ಹಿಂದೆ ಹಲಸು ಖರೀದಿಗೆ ಬಂದಿದ್ದು, ಈ ಸಂದರ್ಭದಲ್ಲಿ ಭವಾನಿ ಅವರು 2 ಹಲಸು ಹಣ್ಣು ತೆಗೆದುಕೊಡಲು ತಿಳಿಸಿದ್ದರು. ಈ ಸಂದರ್ಭದಲ್ಲಿ ಭವಾನಿ ಮನೆಯಲ್ಲಿ ಹಗಲಿನ ವೇಳೆಯಲ್ಲಿ ವೃದ್ಧೆ ಒಂಟಿಯಾಗಿರುವುದನ್ನು ಗಮನಿಸಿ ದರೋಡೆಗೆ ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.
ಆರೋಪಿಗಳ ಪೈಕಿ ಬಾಲ ಸುಬ್ರಮಣ್ಯ ವಿರುದ್ಧ ಈ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಸುಲಿಗೆ ಪ್ರಕರಣಗಳು, ಮೂಲ್ಕಿ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ ದಾಖಲಾಗಿದೆ. ಶ್ಯಾಮ್ ಕುಮಾರ್ ಮೊದಲ ಬಾರಿಗೆ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ಆರೋಪಿಗಳ ಪೈಕಿ ಬಾಲ ಸುಬ್ರಮಣ್ಯ ವಿರುದ್ಧ ಈ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಸುಲಿಗೆ ಪ್ರಕರಣಗಳು, ಮೂಲ್ಕಿ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ ದಾಖಲಾಗಿದೆ. ಶ್ಯಾಮ್ ಕುಮಾರ್ ಮೊದಲ ಬಾರಿಗೆ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ಒಂಟಿಯಾಗಿ ವಾಸಿಸುವ ಮಹಿಳೆಯರು ಅಪರಿಚಿತರಿಗೆ ಬಾಗಿಲು ತೆರೆಯುವ ಮೊದಲು ಎಚ್ಚರಿಕೆ ವಹಿಸುವುದು ಹಾಗೂ ಮನೆ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವುದು ಸುರಕ್ಷತಾ ದೃಷ್ಟಿಯಿಂದ ಅಗತ್ಯ ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
Discover more from Coastal Times Kannada
Subscribe to get the latest posts sent to your email.








Discussion about this post