Asia cup 2025: 17ನೇ ಆವೃತ್ತಿಯ ಏಷ್ಯಾಕಪ್ ಸೆ.9 ರಿಂದ ಪ್ರಾರಂಭಗೊಳ್ಳಲಿವೆ. ಈ ಬಾರಿ ಪಂದ್ಯಗಳು ಟಿ20 ಮಾದರಿಯಲ್ಲಿ ನಡೆಯಲಿದ್ದು ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ. ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ, ಯುಎಇ ಮತ್ತು ಓಮನ್ ತಂಡಗಳು ಸೇರಿವೆ. ಗ್ರೂಪ್ ಬಿ ನಲ್ಲಿ ಅಫ್ಘಾನಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಹಾಂಗ್ ಕಾಂಗ್ ತಂಡಗಳಿವೆ. ಹಾಲಿ ಚಾಂಪಿಯನ್ ಭಾರತ ಈ ಬಾರಿಯೂ ಫೆವರೀಟ್ ತಂಡವಾಗಿ ಕಣಕ್ಕಿಳಿಯುತ್ತಿದೆ. ಇತ್ತ ಮೊದಲ ಸುತ್ತಿಗಾಗಿ 8 ತಂಡಗಳನ್ನು ಎರಡು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್ಗಳಲ್ಲಿರುವ ತಂಡಗಳ ಪಟ್ಟಿ ಈ ಕೆಳಗಿನಂತಿದೆ
ಸೂಪರ್-4 ರೌಂಡ್: ಮೊದಲ ಸುತ್ತಿನ ಎರಡು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 4 ಟೀಮ್ಗಳು ಮಾತ್ರ ದ್ಚಿತೀಯ ಸುತ್ತಿಗೆ ಪ್ರವೇಶಿಸುತ್ತದೆ. ಈ ಹಂತದಲ್ಲಿ ಯಾವುದೇ ಗ್ರೂಪ್ಗಳಿರುವುದಿಲ್ಲ. ಅಂದರೆ 4 ತಂಡಗಳು ಪರಸ್ಪರ ಮುಖಾಮುಖಿಯಾಗಲಿದೆ.
ದ್ವಿತೀಯ ಸುತ್ತಿನ ಬಳಿಕ ಯಾವುದೇ ಸೆಮಿಫೈನಲ್ ಪಂದ್ಯ ಇರುವುದಿಲ್ಲ. ಅಂದರೆ ಸೂಪರ್-4 ಹಂತದಲ್ಲಿ ಒಂದು ತಂಡವು ಮೂರು ಮ್ಯಾಚ್ಗಳನ್ನು ಆಡಲಿದೆ. ಇಲ್ಲಿ ಕೂಡ ಅಂಕ ಪಟ್ಟಿ ಇರಲಿದ್ದು, ಈ ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ ಆಡಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…


ಏಷ್ಯಾಕಪ್ಗೆ ಭಾರತ ತಂಡ: ಸೂರ್ಯ ಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.
Discover more from Coastal Times Kannada
Subscribe to get the latest posts sent to your email.








Discussion about this post