ಮಂಗಳೂರು : ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆಯೊಡ್ಡಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಬಂಧಿತ ಆರೋಪಿ. ಆಗಸ್ಟ್ 29 ರಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ನ್ನು ಖಾಲಿ ಮಾಡಬೇಕು, ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಈ ಬಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ಅವರು ಬಜಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ನೀಡಿದ್ದರು. ಇದನ್ನು ಆಧರಿಸಿ ಮೊ. ನಂ 156/2025 ಕಲಂ: 351(2), 351(3) BNS U/s:- 3(1)d Suppression of unlawful acts against safety of civil aviation act 1982 ರಡಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿ ಬೆದರಿಕೆ ಕರೆ ಮಾಡಿದ ಆರೋಪಿ ತಮಿಳುನಾಡು ರಾಜ್ಯದ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ ಎಂಬಾತನನ್ನು ತಮಿಳುನಾಡು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆರೋಪಿಯು ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ನಂಬರ್ಅನ್ನು ಸಾಮಾಜಿಕ ಜಾಲತಾಣದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು ಬೆಳಕಿಗೆ ಬಂದಿದೆ. ಅದೇ ತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ನ್ನು ಖಾಲಿ ಮಾಡಲು ತಿಳಿಸಿದ್ದು, ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post