ಬಂಟ್ವಾಳ, ಸೆ.8 : 12 ವರ್ಷದ ಅಪ್ರಾಪ್ತ ಬಾಲಕನೊಬ್ಬನ ಮೇಲೆ ಆಮಿಷವೊಡ್ಡಿ ಪ್ರತ್ಯೇಕವಾಗಿ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಳ್ನಾಡು ಗ್ರಾಮದ ಕಾಡುಮಠ ಅಳ್ಳಿಕಂಡೆ ನಿವಾಸಿ ಜಾವಾದ್ (32) (ಅ.ಕ್ರ 185/2026), ಸಾಲೆತ್ತೂರು ಕಟ್ಟೆ ಕಾಲೋನಿ ನಿವಾಸಿ ಸಾಹಿದ್ (32) (ಅ.ಕ್ರ 187/2026) ಹಾಗೂ ಸಾಲೆತ್ತೂರು ಕಟ್ಟೆ ನಿವಾಸಿ ರಿಯಾರ್ಝ್ ಅಲಿಯಾಸ್ ಅಬ್ದುಲ್ ಗಫೂರ್ (42) (ಅ.ಕ್ರ 188/2026) ಬಂಧಿತ ಆರೋಪಿಗಳು.
ಬಾಲಕನಿಗೆ ಆಮಿಷವೊಡ್ಡಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು 15ಕ್ಕೂ ಹೆಚ್ಚು ವ್ಯಕ್ತಿಗಳು ಪ್ರತ್ಯೇಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಬಾಲಕ ತೀವ್ರ ಅಸ್ವಸ್ಥಗೊಂಡು ಆತನ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಾಗ ಪೋಷಕರು ವಿಚಾರಿಸಿದ್ದು, ಈ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ಪೋಷಕರು ಮಕ್ಕಳ ಸಹಾಯವಾಣಿ (1098) ಸಂಪರ್ಕಿಸಿ ದೂರು ನೀಡಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ (CWC) ಅಧಿಕಾರಿಗಳು ಬಾಲಕನ ಹೇಳಿಕೆ ದಾಖಲಿಸಿಕೊಂಡು ನೀಡಿದ ನಿರ್ದೇಶನದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಸೆರೆಹಿಡಿದಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ 12ಕ್ಕೂ ಹೆಚ್ಚು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ. ಸಂತ್ರಸ್ತ ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
Discover more from Coastal Times Kannada
Subscribe to get the latest posts sent to your email.







Discussion about this post