ಮಂಗಳೂರು ಅ.7: ಮೀನುಗಾರಿಕೆ ಎಂಬುದು ಕರಾವಳಿ ಭಾಗದ ಪ್ರಮುಖ ಜೀವನೋವಾಯ ಕಾಯಕ ಮೀನುಗಾರರು. ಈ ಭಾಗದ ಅತ್ಯಂತ ಶ್ರಮ ಜೀವಿ ಸಮುದಾಯ. ಸಮುದ್ರದ ಮೀನುಗಾರಿಕೆಯು ಅಪಾಯಕಾರಿ ವೃತ್ತಿಯಾಗಿದ್ದು ಅದನ್ನೇ ಸವಾಲಾಗಿ ಸ್ವೀಕರಿಸಿ ಬದುಕು ನಡೆಸಿಕೊಂಡು ಹೋಗುವವರು ಮೀನುಗಾರರು. ಸಮುದಾಯಗಳ ಸ್ವಾವಲಂಬಿ ಬದುಕಿಗೆ ಭದ್ರತಾ ಆರ್ಥಿಕ ಸಹಾಯ, ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರುವುದು. ಸರ್ಕಾರಗಳ ಕರ್ತವ್ಯ. ಅ ಮೂಲಕ ಕಡಲ ಮಕ್ಕಳ ಅಭಿವೃದ್ಧಿಗೆ ಎಲ್ಲ ಸರ್ಕಾರಗಳು ಬದ್ಧವಾಗಿರಬೇಕು. “ನುಡಿದಂತೆ ನಡೆದಿದ್ದೇವೆ’ ಎಂದು ಹೇಳುವ ರಾಜ್ಯದ ಕಾಂಗ್ರೆಸ್ ಸರಕಾರ ಕರಾವಳಿಯ ಮೀನುಗಾರರಿಗೆ ಅನ್ಯಾಯವೆಸಗುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಅಂತಹ ಮೀನುಗಾರರ ಸುಭದ್ರ ಬದುಕಿಗೆ ನಮ್ಮ ಬಿಜೆಪಿ ಸರ್ಕಾರದ ಅವಧಿಯ 2023 ರ ಫೆಬ್ರುವರಿ ಬಜೆಟ್ ನಲ್ಲಿ ಕೆಲವು ವಿಶೇಷ ಯೋಜನೆಗಳನ್ನು ಘೋಷಿಸಲಾಗಿತ್ತು. ಅವು ಜಾರಿಯಾಗುವ ಹಂತದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ 20230 ಜುಲೈನಲ್ಲಿ ಹೊಸ ಬಜೆಟ್ ಘೋಷಿಸಿತ್ತು. ಆದರೆ ನಮ್ಮ ಸರ್ಕಾರ ಘೋಷಿಸಿದ್ದ ಬಹುತೇಕ ಎಲ್ಲಾ ವಿಶೇಷ ಯೋಜನೆಗಳನ್ನು ಕಡೆಗಣಿಸುವ ಮೂಲಕ ಮೀನುಗಾರರ ಬದುಕಿಗೆ ಹೂಡತ ನೀಡಿದ್ದಲ್ಲದೇ, ಇತ್ತೀಚೆಗೆ ಕಾಂಗ್ರೆಸ್ಸಿಗರು ತಮ್ಮ ಸರ್ಕಾರವು 100 ದಿನ ಪೂರೈಸುವಷ್ಟರಲ್ಲಿ ಮೀನುಗಾರರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ಈಡೇರಿಸಿದೆ ಎಂದು ಹೇಳುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರ ಮೀನುಗಾರರ ‘ಭರವಸೆ ಈಡೇರಿಸಿದ್ದು ಅಲ್ಲ, ಬದಲಿಗೆ ಕಡೆಗಣಿಸಿದೆ.
ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಚುನಾವಣೆ ಸಂದರ್ಭ ಉಚ್ಚಿಲದಲ್ಲಿ ನಡೆಸಿದ ಸಂವಾದದಲ್ಲಿ ನೀಡಿದ್ದ ಆಶ್ವಾಸನೆ ಈಡೇರಿಲ್ಲ. ಪ್ರತೀ ಮೀನುಗಾರರಿಗೆ 10 ಲಕ್ಷ ರೂ. ವಿಮೆ, ಲೀಟರ್‌ಗೆ 25 ರೂ. ಸಬ್ಸಿಡಿಯಂತೆ ಪ್ರತೀ ದಿನ 500 ಲೀ. ಡೀಸೆಲ್, ಉಚಿತ ಸೀ ಆ್ಯಂಬುಲೆನ್ಸ್, ಅಧಿಕಾರಕ್ಕೆ ಬಂದ ಕೂಡಲೇ ಹೂಳು ಸಮಸ್ಯೆಗೆ ಪರಿಹಾರ ಸೇರಿ ಹಲವಾರು ಆಶ್ವಾಸನೆಗಳನ್ನು ಕಾಂಗ್ರೆಸ್ ನೀಡಿತ್ತು. ಅದ್ಯಾವುದೂ ಕಾರ್ಯಗತಗೊಂಡಿಲ್ಲ. ಕಾಂಗ್ರೆಸ್ ತನ್ನ ಮೊದಲ ಬಜೆಟ್‌ನಲ್ಲಿ ಮೀನುಗಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಘೋಷಿಸಿದ್ದು ಅದನ್ನೂ ಜಾರಿಗೊಳಿಸಿಲ್ಲ ಎಂದರು.
ಹಾಗೆ ನೋಡಿದರೆ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ದ.ಕ. ಜಿಲ್ಲೆಗೆ 3 ವರ್ಷಗಳ ಅವಧಿಯಲ್ಲಿ 16 ಕೋಟಿ 77 ಲಕ್ಷ ರೂ. ಸಬ್ಸಿಡಿ ದೊರೆತಿದೆ. ಇದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರಕ್ಕೆ ಮೀನುಗಾರರ ಬಗ್ಗೆ ಇರುವ ಬದ್ಧತೆಗೆ ಸಾಕ್ಷಿ. ನಮ್ಮ ಬಜೆಟ್‌ನಲ್ಲಿ ನಾಡದೋಣಿ ಮೀನುಗಾರರಿಗೆ ಪೆಟ್ರೋಲ್/ ಡೀಸೆಲ್ ಚಾಲಿತ ಎಂಜಿನ್ ಖರೀದಿಗೆ 50 ಸಾವಿರ ರೂ. ಸಹಾಯಧನ ನೀಡುವ ಕಾರ್ಯಕ್ರಮಕ್ಕೆ 40 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರದ ಬಜೆಟ್‌ನಲ್ಲಿ ಈ ಹಿಂದಿನ 40 ಕೋಟಿ ರೂ. ಅನ್ನು 20 ಕೋಟಿ ರೂ.ಗೆ. ಕಡಿತಗೊಳಿಸಿ ಉಳಿದ 20 ಕೋಟಿಯನ್ನು ಮಾತ್ರ ನೀಡಿದೆ ಎಂದರು.
ಹೊಸ ಮಂಜುಗಡ್ಡೆ ಸ್ಥಾವರಗಳ ನಿರ್ಮಾಣಕ್ಕೆ ಹಾಗೂ ಹಳೆಯ ಮಂಜುಗಡ್ಡೆ ಸ್ಥಾವರಗಳ ಅಧುನೀಕರಣಕ್ಕೆ, ನಿರೋಧಕ ವಾಹನ (ಡೆಫ್ರಿಜರೇಟರ್ F.R.P ನಾಡದೋಣಿ ಖರೀದಿಗೆ, ಸಂವಹನ ಸಾಧನಗಳಿಗೆ, ಸುರಕ್ಷಾ ಸಾಧನೆಗಳಿಗೆ, ಹೀಗೆ ಹತ್ತು ಹಲವು ಯೋಜನೆಗಳಿಗೆ ಈ ಸಬ್ಸಿಡಿಯು ಉಪಯೋಗವಾಗಿದೆ. ಅದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮೀನುಗಾರರ ಬಗ್ಗೆ ಇರುವ ಬದ್ಧತೆಗೆ ಸಾಕ್ಷಿ. ಇನ್ನು ರಾಜ್ಯದಲ್ಲಿ ನಮ್ಮ ಸರ್ಕಾರದ ಅವಧಿಯ ಬಜೆಟ್ ಹಾಗೂ ಕಾಂಗ್ರೆಸ್ ಸರ್ಕಾರದ ಬಜೆಟನ್ನು ಹೋಲಿಸಿ ನೋಡಿದರೆ ಮೀನುಗಾರ ಸಮುದಾಯಕ್ಕೆ ಬಿಜೆಪಿ ನೀಡಿದ ಕೊಡುಗೆ ಏನು? ಕಾಂಗ್ರೆಸ್ ಮಾಡಿದ ಅನ್ಯಾಯವೇನು? ಎಂಬುದು ಅರಿವಾಗುತ್ತದೆ.
ನಮ್ಮ ಬಜೆಟ್‌ನಲ್ಲಿ ಇಸ್ರೋ ನಿರ್ಮಿತ ಜಿಪಿಎಸ್ ಸಂವಹನ ವ್ಯವಸ್ಥೆಯನ್ನು ಎಲ್ಲ ಯಾಂತ್ರೀಕೃತ ದೋಣಿಗಳಲ್ಲಿ ಅಳವಡಿಸಲು 17 ಕೋಟಿ ರೂ. ನಿಗದಿಪಡಿಸಲಾಗಿತ್ತು. ಆದರೆ ಕಾಂಗ್ರೆಸ್ ಸರಕಾರದ ಬಜೆಟ್‌ನಲ್ಲಿ ಈ ಯೋಜನೆಗೆ ಅನುದಾನವನ್ನುಈ ಒದಗಿಸದೆ ಮೀನುಗಾರರ ಸುರಕ್ಷೆಯನ್ನೇ ಅವಗಣಿಸಿದೆ ಎಂದರು.
ಮೇಯರ್ ಸು ಧೀರ್ ಶೆಟ್ಟಿ ಕಣ್ಣೂರು, ಮೀನುಗಾರಿಕೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಪ್ರಮುಖರಾದ ಮೀರಾ ಕರ್ಕೇರ, ಗೌತಮ್, ಪದ್ಮನಾಭ, ವಿನೋದ್ ಮೆಂಡನ್ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post