• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು| ಕಾಂಗ್ರೆಸ್‌ ಸರಕಾರದಿಂದ ಮೀನುಗಾರರಿಗೆ ಅನ್ಯಾಯ: ಶಾಸಕ ಡಿ. ವೇದವ್ಯಾಸ ಕಾಮತ್‌

Coastal Times by Coastal Times
October 8, 2023
in ಕರಾವಳಿ
ಮಂಗಳೂರು| ಕಾಂಗ್ರೆಸ್‌ ಸರಕಾರದಿಂದ ಮೀನುಗಾರರಿಗೆ ಅನ್ಯಾಯ: ಶಾಸಕ ಡಿ. ವೇದವ್ಯಾಸ ಕಾಮತ್‌
32
VIEWS
WhatsappTelegramShare on FacebookShare on Twitter

ಮಂಗಳೂರು ಅ.7: ಮೀನುಗಾರಿಕೆ ಎಂಬುದು ಕರಾವಳಿ ಭಾಗದ ಪ್ರಮುಖ ಜೀವನೋವಾಯ ಕಾಯಕ ಮೀನುಗಾರರು. ಈ ಭಾಗದ ಅತ್ಯಂತ ಶ್ರಮ ಜೀವಿ ಸಮುದಾಯ. ಸಮುದ್ರದ ಮೀನುಗಾರಿಕೆಯು ಅಪಾಯಕಾರಿ ವೃತ್ತಿಯಾಗಿದ್ದು ಅದನ್ನೇ ಸವಾಲಾಗಿ ಸ್ವೀಕರಿಸಿ ಬದುಕು ನಡೆಸಿಕೊಂಡು ಹೋಗುವವರು ಮೀನುಗಾರರು. ಸಮುದಾಯಗಳ ಸ್ವಾವಲಂಬಿ ಬದುಕಿಗೆ ಭದ್ರತಾ ಆರ್ಥಿಕ ಸಹಾಯ, ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರುವುದು. ಸರ್ಕಾರಗಳ ಕರ್ತವ್ಯ. ಅ ಮೂಲಕ ಕಡಲ ಮಕ್ಕಳ ಅಭಿವೃದ್ಧಿಗೆ ಎಲ್ಲ ಸರ್ಕಾರಗಳು ಬದ್ಧವಾಗಿರಬೇಕು. “ನುಡಿದಂತೆ ನಡೆದಿದ್ದೇವೆ’ ಎಂದು ಹೇಳುವ ರಾಜ್ಯದ ಕಾಂಗ್ರೆಸ್‌ ಸರಕಾರ ಕರಾವಳಿಯ ಮೀನುಗಾರರಿಗೆ ಅನ್ಯಾಯವೆಸಗುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್‌ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಅಂತಹ ಮೀನುಗಾರರ ಸುಭದ್ರ ಬದುಕಿಗೆ ನಮ್ಮ ಬಿಜೆಪಿ ಸರ್ಕಾರದ ಅವಧಿಯ 2023 ರ ಫೆಬ್ರುವರಿ ಬಜೆಟ್ ನಲ್ಲಿ ಕೆಲವು ವಿಶೇಷ ಯೋಜನೆಗಳನ್ನು ಘೋಷಿಸಲಾಗಿತ್ತು. ಅವು ಜಾರಿಯಾಗುವ ಹಂತದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ 20230 ಜುಲೈನಲ್ಲಿ ಹೊಸ ಬಜೆಟ್ ಘೋಷಿಸಿತ್ತು. ಆದರೆ ನಮ್ಮ ಸರ್ಕಾರ ಘೋಷಿಸಿದ್ದ ಬಹುತೇಕ ಎಲ್ಲಾ ವಿಶೇಷ ಯೋಜನೆಗಳನ್ನು ಕಡೆಗಣಿಸುವ ಮೂಲಕ ಮೀನುಗಾರರ ಬದುಕಿಗೆ ಹೂಡತ ನೀಡಿದ್ದಲ್ಲದೇ, ಇತ್ತೀಚೆಗೆ ಕಾಂಗ್ರೆಸ್ಸಿಗರು ತಮ್ಮ ಸರ್ಕಾರವು 100 ದಿನ ಪೂರೈಸುವಷ್ಟರಲ್ಲಿ ಮೀನುಗಾರರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ಈಡೇರಿಸಿದೆ ಎಂದು ಹೇಳುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರ ಮೀನುಗಾರರ ‘ಭರವಸೆ ಈಡೇರಿಸಿದ್ದು ಅಲ್ಲ, ಬದಲಿಗೆ ಕಡೆಗಣಿಸಿದೆ.

ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಚುನಾವಣೆ ಸಂದರ್ಭ ಉಚ್ಚಿಲದಲ್ಲಿ ನಡೆಸಿದ ಸಂವಾದದಲ್ಲಿ ನೀಡಿದ್ದ ಆಶ್ವಾಸನೆ ಈಡೇರಿಲ್ಲ. ಪ್ರತೀ ಮೀನುಗಾರರಿಗೆ 10 ಲಕ್ಷ ರೂ. ವಿಮೆ, ಲೀಟರ್‌ಗೆ 25 ರೂ. ಸಬ್ಸಿಡಿಯಂತೆ ಪ್ರತೀ ದಿನ 500 ಲೀ. ಡೀಸೆಲ್‌, ಉಚಿತ ಸೀ ಆ್ಯಂಬುಲೆನ್ಸ್‌, ಅಧಿಕಾರಕ್ಕೆ ಬಂದ ಕೂಡಲೇ ಹೂಳು ಸಮಸ್ಯೆಗೆ ಪರಿಹಾರ ಸೇರಿ ಹಲವಾರು ಆಶ್ವಾಸನೆಗಳನ್ನು ಕಾಂಗ್ರೆಸ್‌ ನೀಡಿತ್ತು. ಅದ್ಯಾವುದೂ ಕಾರ್ಯಗತಗೊಂಡಿಲ್ಲ. ಕಾಂಗ್ರೆಸ್‌ ತನ್ನ ಮೊದಲ ಬಜೆಟ್‌ನಲ್ಲಿ ಮೀನುಗಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಘೋಷಿಸಿದ್ದು ಅದನ್ನೂ ಜಾರಿಗೊಳಿಸಿಲ್ಲ ಎಂದರು.

ಹಾಗೆ ನೋಡಿದರೆ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ದ.ಕ. ಜಿಲ್ಲೆಗೆ 3 ವರ್ಷಗಳ ಅವಧಿಯಲ್ಲಿ 16 ಕೋಟಿ 77 ಲಕ್ಷ ರೂ. ಸಬ್ಸಿಡಿ ದೊರೆತಿದೆ. ಇದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರಕ್ಕೆ ಮೀನುಗಾರರ ಬಗ್ಗೆ ಇರುವ ಬದ್ಧತೆಗೆ ಸಾಕ್ಷಿ. ನಮ್ಮ ಬಜೆಟ್‌ನಲ್ಲಿ ನಾಡದೋಣಿ ಮೀನುಗಾರರಿಗೆ ಪೆಟ್ರೋಲ್‌/ ಡೀಸೆಲ್‌ ಚಾಲಿತ ಎಂಜಿನ್‌ ಖರೀದಿಗೆ 50 ಸಾವಿರ ರೂ. ಸಹಾಯಧನ ನೀಡುವ ಕಾರ್ಯಕ್ರಮಕ್ಕೆ 40 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿತ್ತು. ಆದರೆ ಕಾಂಗ್ರೆಸ್‌ ಸರಕಾರದ ಬಜೆಟ್‌ನಲ್ಲಿ ಈ ಹಿಂದಿನ 40 ಕೋಟಿ ರೂ. ಅನ್ನು 20 ಕೋಟಿ ರೂ.ಗೆ. ಕಡಿತಗೊಳಿಸಿ ಉಳಿದ 20 ಕೋಟಿಯನ್ನು ಮಾತ್ರ ನೀಡಿದೆ ಎಂದರು.

ಹೊಸ ಮಂಜುಗಡ್ಡೆ ಸ್ಥಾವರಗಳ ನಿರ್ಮಾಣಕ್ಕೆ ಹಾಗೂ ಹಳೆಯ ಮಂಜುಗಡ್ಡೆ ಸ್ಥಾವರಗಳ ಅಧುನೀಕರಣಕ್ಕೆ, ನಿರೋಧಕ ವಾಹನ (ಡೆಫ್ರಿಜರೇಟರ್ F.R.P ನಾಡದೋಣಿ ಖರೀದಿಗೆ, ಸಂವಹನ ಸಾಧನಗಳಿಗೆ, ಸುರಕ್ಷಾ ಸಾಧನೆಗಳಿಗೆ, ಹೀಗೆ ಹತ್ತು ಹಲವು ಯೋಜನೆಗಳಿಗೆ ಈ ಸಬ್ಸಿಡಿಯು ಉಪಯೋಗವಾಗಿದೆ. ಅದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮೀನುಗಾರರ ಬಗ್ಗೆ ಇರುವ ಬದ್ಧತೆಗೆ ಸಾಕ್ಷಿ. ಇನ್ನು ರಾಜ್ಯದಲ್ಲಿ ನಮ್ಮ ಸರ್ಕಾರದ ಅವಧಿಯ ಬಜೆಟ್ ಹಾಗೂ ಕಾಂಗ್ರೆಸ್ ಸರ್ಕಾರದ ಬಜೆಟನ್ನು ಹೋಲಿಸಿ ನೋಡಿದರೆ ಮೀನುಗಾರ ಸಮುದಾಯಕ್ಕೆ ಬಿಜೆಪಿ ನೀಡಿದ ಕೊಡುಗೆ ಏನು? ಕಾಂಗ್ರೆಸ್ ಮಾಡಿದ ಅನ್ಯಾಯವೇನು? ಎಂಬುದು ಅರಿವಾಗುತ್ತದೆ.

ನಮ್ಮ ಬಜೆಟ್‌ನಲ್ಲಿ ಇಸ್ರೋ ನಿರ್ಮಿತ ಜಿಪಿಎಸ್‌ ಸಂವಹನ ವ್ಯವಸ್ಥೆಯನ್ನು ಎಲ್ಲ ಯಾಂತ್ರೀಕೃತ ದೋಣಿಗಳಲ್ಲಿ ಅಳವಡಿಸಲು 17 ಕೋಟಿ ರೂ. ನಿಗದಿಪಡಿಸಲಾಗಿತ್ತು. ಆದರೆ ಕಾಂಗ್ರೆಸ್‌ ಸರಕಾರದ ಬಜೆಟ್‌ನಲ್ಲಿ ಈ ಯೋಜನೆಗೆ ಅನುದಾನವನ್ನುಈ ಒದಗಿಸದೆ ಮೀನುಗಾರರ ಸುರಕ್ಷೆಯನ್ನೇ ಅವಗ‌ಣಿಸಿದೆ ಎಂದರು.

ಮೇಯರ್‌ ಸು ಧೀರ್‌ ಶೆಟ್ಟಿ ಕಣ್ಣೂರು, ಮೀನುಗಾರಿಕೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್‌ ಕುಮಾರ್‌, ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್‌ ಶೆಟ್ಟಿ, ಪ್ರಮುಖರಾದ ಮೀರಾ ಕರ್ಕೇರ, ಗೌತಮ್‌, ಪದ್ಮನಾಭ, ವಿನೋದ್‌ ಮೆಂಡನ್‌ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮೂಡಬಿದ್ರೆ | ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ, ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ

Next Post

ಬಂಟ್ವಾಳ | ಸಜಿಪಮೂಡ ಪ್ರೌಢಶಾಲೆ, ಒಂದೇ ತರಗತಿಯೊಳಗೆ ಐವರು ಅವಳಿ-ಜವಳಿ ವಿದ್ಯಾರ್ಥಿನಿಯರು ಶಿಕ್ಷಕರಿಗೆ ಫುಲ್ ಕನ್ಫ್ಯೂಷನ್

Related Posts

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!
ಕರಾವಳಿ

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
59
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು
ಕರಾವಳಿ

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
26
Next Post
ಬಂಟ್ವಾಳ | ಸಜಿಪಮೂಡ ಪ್ರೌಢಶಾಲೆ, ಒಂದೇ ತರಗತಿಯೊಳಗೆ ಐವರು ಅವಳಿ-ಜವಳಿ ವಿದ್ಯಾರ್ಥಿನಿಯರು ಶಿಕ್ಷಕರಿಗೆ ಫುಲ್ ಕನ್ಫ್ಯೂಷನ್

ಬಂಟ್ವಾಳ | ಸಜಿಪಮೂಡ ಪ್ರೌಢಶಾಲೆ, ಒಂದೇ ತರಗತಿಯೊಳಗೆ ಐವರು ಅವಳಿ-ಜವಳಿ ವಿದ್ಯಾರ್ಥಿನಿಯರು ಶಿಕ್ಷಕರಿಗೆ ಫುಲ್ ಕನ್ಫ್ಯೂಷನ್

Discussion about this post

Recent News

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
59
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d