ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ (ಕೂನೂರು ಬಳಿ) ಘಟನಾ ಸ್ಥಳದಲ್ಲಿ 8 ಮೃತದೇಹಗಳು ಪತ್ತೆಯಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಗಂಭೀರವಾಗಿ ಗಾಯಗೊಂಡು ಪತ್ತೆಯಾಗಿರುವ ಮೂವರನ್ನು ನೀಲಗಿರೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ಘಟನೆ ನಡೆದ ಸ್ಥಳ ವೆಲ್ಲಿಂಗ್‌ಟನ್‌ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ.
ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.
ತುರ್ತು ರಕ್ಷಣಾ ಪಡೆಗಳು ಸ್ಥಳದಲ್ಲಿ ತೀವ್ರ ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದು ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಪತನಗೊಂಡಿರುವುದಾಗಿ ಐಎಎಫ್ ತಿಳಿಸಿತ್ತು.
An Indian Air Force (IAF) helicopter carrying the Chief of Defence Staff Gen #BipinRawat, his wife and seven others crashed in #Coonoor in the #Nilgiris district on Wednesday.
Read: https://t.co/sXNJyviO5Y
Video: Special arrangement#HelicopterCrash #TamilNadu pic.twitter.com/Fee4u3CysR
— Deccan Herald (@DeccanHerald) December 8, 2021
Discover more from Coastal Times Kannada
Subscribe to get the latest posts sent to your email.
Discussion about this post