ಮಂಗಳೂರು, ಡಿ.7: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ.25 ರಿಂದ 27ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ 37ನೇ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಮಂಗಳೂರಿನ ಅನಘಾ ರಾಜೇಶ್ ಹಾಗೂ ಆರ್ನಾ ರಾಜೇಶ್ ಪದಕಗಳನ್ನು ಪಡೆದು ಆರ್ನಾ ರಾಜೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
5 ರಿಂದ 7 ವರ್ಷದೊಳಗಿನ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಆರ್ನಾ ರಾಜೇಶ್ ಒಂದು ಚಿನ್ನದ ಹಾಗೂ ಒಂದು ಬೆಳ್ಳಿಯ ಪದಕ ಪಡೆದು ದೆಹಲಿಯಲ್ಲಿ ಡಿಸೆಂಬರ್ 11 ರಿಂದ 14ರವರೆಗೆ ನಡೆಯುವ ರಾಷ್ಟಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ. 11 ರಿಂದ 14 ವರ್ಷದೊಳಗಿನ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಅನಘಾ ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಪಡೆದಿದ್ದಾರೆ.
ಅನಘಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 6 ನೇ ತರಗತಿಯಲ್ಲಿ ಹಾಗೂ ಆರ್ನಾ ರಾಜೇಶ್ ಅದೇ ಶಾಲೆಯ 1 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಇಬ್ಬರೂ ಬಾಲಕಿಯರು ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯರು.
ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯರಾಗಿರುವ ಈ ಇಬ್ಬರು ಬಾಲಕಿಯರು ಕ್ಲಬ್ ನ ತರಬೇತುದಾರರಾದ ಮೋಹನ್ ದಾಸ್.ಕೆ , ಜಯರಾಜ್ ಹಾಗೂ ರಮಾನಂದ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಬೆಂಗಳೂರಿನ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post